ತುಮಕೂರು ರಾಯದುರ್ಗ ರೈಲು ಸನ್ನಿಹಿತ

KannadaprabhaNewsNetwork |  
Published : Jul 01, 2026, 01:15 AM IST
ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ | Kannada Prabha

ಸಾರಾಂಶ

ಗಡಿಭಾಗಗಳ ಕನಸಿನ ಕೂಸಾದ ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿಗೆ ಚಾಲನೆ ಸಿಕ್ಕಿದ್ದು ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಹತ್ತಿರ ಬಂದಂತೆ ಕಾಣಿಸುತ್ತಿದೆ.

ಎಚ್.ಎನ್.ನಾಗರಾಜು ಕನ್ನಡಪ್ರಭ ವಾರ್ತೆ ಕೊರಟಗೆರೆ

ಗಡಿಭಾಗಗಳ ಕನಸಿನ ಕೂಸಾದ ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿಗೆ ಚಾಲನೆ ಸಿಕ್ಕಿದ್ದು ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಹತ್ತಿರ ಬಂದಂತೆ ಕಾಣಿಸುತ್ತಿದೆ.

ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನು ೨೦೧೨ರಲ್ಲಿ ಆರಂಭಿಸಲಾಯಿತು. ಒಟ್ಟು ೨೦೬ ಕಿ.ಮೀ. ಉದ್ದದ ಲೈನ್ ಇದಾಗಿದ್ದು, ಸುಮಾರು ೧೮೫೦ ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಘೋಷಿಸಿದ್ದರೂ, ಆ ನಂತರ ೨೫೦೦ ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ೧೨೫ ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ. ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ ೮೧ ಕಿ.ಮೀ ವರೆಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಿಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ನನಗುದ್ದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭವಾಗಿರುವುದು ಈ ಭಾಗದ ಕೂಲಿ ಕಾರ್ಮಿಕರಿಗೆ, ತುಮಕೂರು ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಂತಸ ತಂದಿದೆ.

ಕೇಂದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಭರವಸೆ

ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಜಯಗಳಿಸಿದ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ರೈಲ್ಚೆ ಸಚಿವರಾಗಿ ಸೋಮಣ್ಣ ಅವರನ್ನ ಆಯ್ಕೆ ಮಾಡಿದ್ದು ತುಮಕೂರು ಜನರಿಗೆ ಅದೃಷ್ಟ ಬಂದಂತೆ ಆಗಿದೆ. ಜಿಲ್ಲೆಯಲ್ಲಿ ನೆನಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಇಂದು ಚಾಲನೆಗೊಂಡಿವೆ ಕೆಲವು ಕಾಮಗಾರಿಗಳು ಮುಗಿದಿವೆ. ಇದರ ಜೊತೆಗೆ ಹಲವಾರು ವರ್ಷಗಳಿಂದ ಕಾಮಗಾರಿಯೇ ಪ್ರಾರಂಭವಾಗದ ತುಮಕೂರು ರಾಯದುರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಸಚಿವ ವಿ.ಸೋಮಣ್ಣ ಅವರು ೨೦೨೭ರ ಒಳಗೆ ಕಾಮಗಾರಿ ಮುಗಿಯುವ ಭರವಸೆ ನೀಡಿದ್ದಾರೆ.

ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿ ಹಲವು ವರ್ಷಗಳಿಂದ ನೆನಗುದ್ದಿಗೆ ಬಿದ್ದಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಪಡೆಯುತ್ತಿದಂತೆ ಡಾ.ಜಿ.ಪರಮೇಶ್ವರ್ ಅವರು ಪಾವಗಡ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಂದು ವರ್ಷದೊಳಗೆ ಪಾವಗಡದಿಂದ ತುಮಕೂರಿನವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋಟ್;

ಬಹು ವರ್ಷಗಳ ಕನಸಿನ ಕೂಸಾದ ತುಮಕೂರು ರಾರ್ಯದುರ್ಗ ರೈಲ್ವೆ ಕಾಮಗಾರಿ ಕನಸಾಗಿ ಉಳಿದಿತ್ತು. ನಾನು ನಮ್ಮ ಹಳ್ಳಿಯಿಂದ ತುಮಕೂರಿಗೆ ಕೆಲಸಕ್ಕೆ ಹೋಗುತ್ತಿದ್ದು, ತುಮಕೂರು ಪಾವಗಡ ರಾಜ್ಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿದ್ದು, ಬೈಕ್ ಸವಾರರು ಜೀವ ಕೈಯಲ್ಲಿ ಇಟ್ಟುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಮಹೇಶ್ ಕೂಲಿ ಕಾರ್ಮಿಕ ಮಲಪನಹಳ್ಳಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ಉಪನ್ಯಾಸಕರ ವೇತನ ಭರಿಸುವುದು ವಿವಿಗಳಿಗೆ ಅಸಾಧ್ಯ: ಮಧು
ಬದುಕಿನ ಸವಾಲು ಎದುರಿಸಲು ಪುಸ್ತಕ ಓದಿ: ಡಾ.ಮಾನಸ