ತುಮಕೂರು ವಿವಿ ಕಲಾ ಕಾಲೇಜು ಚಾಂಪಿಯನ್

KannadaprabhaNewsNetwork |  
Published : May 21, 2026, 01:15 AM IST
0 | Kannada Prabha

ಸಾರಾಂಶ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಅಂತರ್ ಕಾಲೇಜು ಪುರುಷರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ತುಮಕೂರು ವಿವಿ ಕಲಾ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ವಿಜ್ಞಾನ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಕನ್ನಡಪ್ರಭ ವಾರ್ತೆ, ತುಮಕೂರುತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಅಂತರ್ ಕಾಲೇಜು ಪುರುಷರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ತುಮಕೂರು ವಿವಿ ಕಲಾ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ವಿಜ್ಞಾನ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಭ ಕೆ. ವಿ. ಅವರು, ಇತ್ತೀಚಿನ ದಿನಗಳಲ್ಲಿ ಯುವಕರು ಸಣ್ಣಪುಟ್ಟ ವಿಚಾರಗಳಿಗೆ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆಯಂತಹ ನಿರ್ಧಾರಗಳಿಗೆ ಒಳಗಾಗುತ್ತಿರುವುದು ವಿಷಾದನೀಯ. ಆದರೆ ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಉದಾತ್ತ ಮನೋಭಾವನ್ನು ಹೊಂದಿರುತ್ತಾರೆ. ಕ್ರೀಡೆ ಕೇವಲ ಆಟಕ್ಕಾಗಿ ಅಲ್ಲ, ಅದು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.ಕಲಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಗಳ ಮಧ್ಯದ ಓದಿಗೆ ಸೀಮಿತವಾಗಬಾರದು. ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕöÈತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.ತುಮಕೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್., ಡಾ. ಸೌಭಾಗ್ಯ ಬಿ. ಎಸ್., ಮನೋಹರ್ ಎ. ಪಿ., ತೀರ್ಪುಗಾರಾದ ರಾಷ್ಟ್ರೀಯ ಆಟಗಾರರಾದ ಹರ್ಷಿತ್, ದೀಲಿಪ್, ದರ್ಶನ್ ಹಾಗೂ ರವಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಒಂದು ವಾರದಲ್ಲಿ ಮುಕ್ತಾಯ
ಜೂನ್ 5ಕ್ಕೆ 10 ಸಾವಿರ ಬೈಕ್‌ಗಳ ವಿಧಾನಸೌಧ ಚಲೋ