ತಿರುಪತಿ ತಿಮ್ಮಪ್ಪನಿಗೆ ತುಮುಲ್ ತುಪ್ಪ

KannadaprabhaNewsNetwork |  
Published : Jul 17, 2025, 12:30 AM IST
 | Kannada Prabha

ಸಾರಾಂಶ

ರಾಜ್ಯದ ನಂದಿನಿ ತುಪ್ಪ ಕಳೆದ ಆರೇಳು ವರ್ಷಗಳ ನಂತರ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ಮತ್ತೆ ಟಿಟಿಡಿ ದೇವಾಲಯಕ್ಕೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಹಾಲು ಒಕ್ಕೂಟದಿಂದ ಟಿಟಿಡಿ ದೇವಾಲಯಕ್ಕೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್ ವಾಹನಕ್ಕೆ ತುಮುಲ್ ಅಧ್ಯಕ್ಷ ಹಾಗೂ ಶಾಸಕ ಎಚ್.ವಿ. ವೆಂಕಟೇಶ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು ರಾಜ್ಯದ ನಂದಿನಿ ತುಪ್ಪ ಕಳೆದ ಆರೇಳು ವರ್ಷಗಳ ನಂತರ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗಾಗಿ ಮತ್ತೆ ಟಿಟಿಡಿ ದೇವಾಲಯಕ್ಕೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಹಾಲು ಒಕ್ಕೂಟದಿಂದ ಟಿಟಿಡಿ ದೇವಾಲಯಕ್ಕೆ ತುಪ್ಪ ಕೊಂಡೊಯ್ಯುವ ಟ್ಯಾಂಕರ್ ವಾಹನಕ್ಕೆ ತುಮುಲ್ ಅಧ್ಯಕ್ಷ ಹಾಗೂ ಶಾಸಕ ಎಚ್.ವಿ. ವೆಂಕಟೇಶ್ ಚಾಲನೆ ನೀಡಿದರು.

ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮುಲ್ ಆರಂಭಿಸಿದೆ.

ನಂತರ ಮಾತನಾಡಿದ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಪ್ರಸ್ತುತ ಪ್ರತಿದಿನ 10 ಲಕ್ಷದ 50ಸಾವಿರ ಲೀಟರ್ ಹಾಲು ದಾಖಲೆ ಪ್ರಮಾಣದಲ್ಲಿ ಶೇಖರಣೆಯಾಗುತ್ತಿದೆ ಎಂದರು. ಪ್ರತಿದಿನ ಶೇಖರಣೆಯಾಗುತ್ತಿರುವ ಹಾಲಿನ ಪೈಕಿ ಬೆಂಗಳೂರಿಗೆ 1.95 ಲಕ್ಷ ಲೀಟರ್ ಹಾಲು ಹಾಗೂ ತುಮಕೂರಿನಲ್ಲಿ 1.20 ಲಕ್ಷ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. ಹಾಗೆಯೇ ಕೇರಳದಲ್ಲಿ ಸರಾಸರಿ ೫೦ ರಿಂದ ೬೦ಸಾವಿರ ಲೀಟರ್ ಹಾಲು ಹಾಗೂ ಬಾಂಬೆಯಲ್ಲಿ 1 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಕ್ಷೀರಭಾಗ್ಯ ಯೋಜನೆಯಡಿ ಪ್ರತಿದಿನ ಶಾಲಾ ಮಕ್ಕಳಿಗೆ ಕುಡಿಯಲು ಹಾಲು ವಿತರಿಸುವ ಸಲುವಾಗಿ 80 ಸಾವಿರ ಲೀಟರ್ ಹಾಲು ವಿನಿಯೋಗಿಸಲಾಗುತ್ತಿದೆ. ನಮ್ಮ ಒಕ್ಕೂಟದ 80 ಸಾವಿರ ಹಾಲನ್ನು ಪೌಡರ್ ಮಾಡಿ ಶಾಲಾ ಮಕ್ಕಳ ಕ್ಷೀರಭಾಗ್ಯ ಯೋಜನೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು. 1 ಲಕ್ಷ ಲೀಟರ್ ಮೊಸರು ಮಾರಾಟವಾಗುತ್ತಿದೆ. ಜೊತೆಗೆ 4 ಟ್ಯಾಂಕರ್ ಲೋಡ್ ತುಪ್ಪ ಸಹ ಮಾರಾಟ ಮಾಡಲಾಗುತ್ತಿದೆ. ಒಟ್ಟಾರೆ ತುಮಕೂರು ಹಾಲು ಒಕ್ಕೂಟದಲ್ಲಿ 1 ಲೀಟರ್ ಹಾಲು ಉಳಿಯದಂತೆ ಶೇಖರಣೆಯಾಗುತ್ತಿರುವ ಎಲ್ಲ ಹಾಲು ಮಾರಾಟವಾಗುತ್ತಿದೆ ಎಂದು ತಿಳಿಸಿದರು.

ತುಮಕೂರು ಹಾಲು ಒಕ್ಕೂಟಕ್ಕೆ ಹಾಲು ನೀಡುವ ರೈತರಿಗೆ ಯಾವುದೇ ರೀತಿಯ ಬಾಕಿ ಇಲ್ಲದಂತೆ ಬಟವಾಡೆ ಮಾಡಲಾಗುತ್ತಿದೆ ಎಂದರು. ನಾನು ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷನಾದ ಬಳಿಕ ಎಲ್ಲ ನಿರ್ದೇಶಕರು ಹಾಗೂ ಆಡಳಿತ ಮಂಡಳಿಯವರು ಸಕ್ರಿಯವಾಗಿ ಒಕ್ಕೂಟದ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಉತ್ತಮ ಆಡಳಿತ ನಡೆಯಲು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತುಮುಲ್ ನಿರ್ದೇಶಕರಾದ ಡಿ. ಕೃಷ್ಣಕುಮಾರ್, ಮಹಾಲಿಂಗಪ್ಪ, ಎಂ.ಕೆ. ಪ್ರಕಾಶ್, ಭಾರತಿ ಶ್ರೀನಿವಾಸ್, ಚಿ.ನಾ.ಹಳ್ಳಿಯ ಪ್ರಕಾಶ್, ನಂಜೇಗೌಡ, ನಾಗೇಶ್‌ಬಾಬು, ಸಿದ್ದಲಿಂಗಯ್ಯ, ಚಂದ್ರಶೇಖರರೆಡ್ಡಿ, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ