ತುಂಗಭದ್ರಾ ಡ್ಯಾಂಗೆ ಒಂದೇ ದಿನ 1 ಟಿಎಂಸಿಗೂ ಹೆಚ್ಚು ನೀರು

KannadaprabhaNewsNetwork |  
Published : May 30, 2025, 01:11 AM ISTUpdated : May 30, 2025, 11:26 AM IST
ಮಳೆ. | Kannada Prabha

ಸಾರಾಂಶ

ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಮುನಿರಾಬಾದ್‌ ಸಮೀಪದ ತುಂಗಭದ್ರಾ ಜಲಾಶಯಕ್ಕೆಗುರುವಾರ ಒಂದೇ ದಿನ 12,700 ಕ್ಯುಸೆಕ್‌ಗೂ (1 ಟಿಎಂಸಿ) ಅಧಿಕ ನೀರು ಹರಿದು ಬಂದಿದೆ.

 ಬೆಂಗಳೂರು : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಮುನಿರಾಬಾದ್‌ ಸಮೀಪದ ತುಂಗಭದ್ರಾ ಜಲಾಶಯಕ್ಕೆಗುರುವಾರ ಒಂದೇ ದಿನ 12,700 ಕ್ಯುಸೆಕ್‌ಗೂ (1 ಟಿಎಂಸಿ) ಅಧಿಕ ನೀರು ಹರಿದು ಬಂದಿದ್ದು, ಜಲಾಶಯದಲ್ಲಿ ಪ್ರಸ್ತುತ 12 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ.

ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ನೀರಿನ ಮಟ್ಟ 98 ( ಗರಿಷ್ಟ 124.80) ಅಡಿಗಳಿಗೆ ಏರಿಕೆಯಾಗಿದೆ. ಜಲಾಶಯಕ್ಕೆ 22,788 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಒಂದೆರಡು ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ 100 ಅಡಿಗಳಿಗೆ ಏರುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಗೆ 28ಕ್ಕೂ ಅಧಿಕ ಮಳೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿರುವ ಅಣ್ಣಪ್ಪಸ್ವಾಮಿ ದೇವಾಲಯದ ಬಳಿ ಮರವೊಂದು ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆ ಭೀಮಾ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ಪಾತ್ರದ ಕಂಗಳೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಕಲಬುರಗಿಯಲ್ಲಿ ಸತತ ಮಳೆಗೆ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇನ್ನು ಮಹಾರಾಷ್ಟ್ರದಲ್ಲಿ ಮಳೆ ಜೋರಾಗುತ್ತಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚಿಸಲಾಗಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌:

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮೇ 30ರಂದು ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ.  

ಜೂ.1ರಿಂದ ಮೀನುಗಾರಿಕೆ ನಿಷೇಧಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂ.1 ರಿಂದ ಜು.30 ರವರೆಗೆ ರಾಜ್ಯದ ಎಲ್ಲ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.

PREV
Read more Articles on

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್