15ರಂದು ಪುಣ್ಯಕೋಟಿ ಮಠದಿಂದ ತುಂಗಭದ್ರಾರತಿ

KannadaprabhaNewsNetwork |  
Published : Feb 12, 2025, 12:30 AM IST
11 ಎಚ್‍ಆರ್‍ಆರ್ 06ಹರಿಹರ ಸಮೀಪದ ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ವರ ಶ್ರೀ ಮಾತನಾಡಿದರು. | Kannada Prabha

ಸಾರಾಂಶ

ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ ತುಂಗಭದ್ರಾ ನದಿ ತೀರದಲ್ಲಿರುವ ಪುಣ್ಯಕೋಟಿ ಮಠದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದ ತುಂಗಾರತಿ ಕಾರ್ಯಕ್ರಮವನ್ನು ಈ ವರ್ಷದಿಂದ ತುಂಗಭದ್ರಾರತಿ ಎಂಬುದಾಗಿ ನದಿಯ ಪೂರ್ಣ ಹೆಸರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದಿದ್ದಾರೆ.

- ತುಂಗಾರತಿ ಹೆಸರು ಬದಲಿಸಿ ಆಯೋಜನೆ: : ಜಗದೀಶ್ವರ ಶ್ರೀ ಹೇಳಿಕೆ

- - - ಕನ್ನಡಪ್ರಭ ವಾರ್ತೆ ಹರಿಹರ

ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ ತುಂಗಭದ್ರಾ ನದಿ ತೀರದಲ್ಲಿರುವ ಪುಣ್ಯಕೋಟಿ ಮಠದಲ್ಲಿ ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದ ತುಂಗಾರತಿ ಕಾರ್ಯಕ್ರಮವನ್ನು ಈ ವರ್ಷದಿಂದ ತುಂಗಭದ್ರಾರತಿ ಎಂಬುದಾಗಿ ನದಿಯ ಪೂರ್ಣ ಹೆಸರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದರು.

ಕೋಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಭಾರತದ ಗಂಗಾನದಿಯ ತೀರದಲ್ಲಿ ಗಂಗಾರತಿ ಮಾದರಿಯಲ್ಲಿ ತುಂಗಭದ್ರಾ ನದಿಗೆ ತುಂಗಭದ್ರಾರತಿ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಬಾರಿ ನಡೆಯುವ ಆರನೇ ಐತಿಹಾಸಿಕ ಕಾರ್ಯಕ್ರಮದಲ್ಲಿ ಶ್ರೀಶೈಲ ಮಹಾಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಸಾನಿಧ್ಯ ವಹಿಸುವರು. ಸವಣೂರು ದೊಡ್ಡ ಹುಣಸೇ ಕಲ್ಮಠದ ಚನ್ನಬಸವ ಶ್ರೀ, ಕಡೇನಂದಿಹಳ್ಳಿ ರೇವಣಸಿದ್ದೇಶ್ವರ ಪುಣ್ಯಶ್ರಮದ ರೇವಣಸಿದ್ಧ ಶಿವಾಚಾರ್ಯ ಶ್ರೀ, ಅಕ್ಕಿಆಲೂರು ಮುತ್ತಿನಕಂತಿ ಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀ, ಧರ್ಮಕ್ಷೇತ್ರ ನಾಗಮಂದ ಶಿವಯೋಗಿ ಶಿವಾನಂದ ಶಿವಾಚಾರ್ಯ ಶ್ರೀ, ವಿಜಯಪುರ ಶ್ರೀ ಸಿದ್ಧಲಿಂಗೇಶ್ವರ ಮಠದ ಸಿದ್ಧಲಿಂಗ ಶ್ರೀ ಭಾಗವಹಿಸಲಿದ್ದಾರೆ ಎಂದರು.

ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅಧ್ಯಕ್ಷೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿ ಉಸ್ತುವಾರಿ ಸಚಿವ ಶಿವಾನಂದ ಎಸ್ ಪಾಟೀಲ, ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್, ದಾವಣಗೆರೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಭಾಗವಹಿಸುವರು ಎಂದರು.

ಅತಿಥಿಗಳಾಗಿ ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕರಾದ ಎಚ್.ಎಸ್ ಶಿವಶಂಕರ್, ಎಸ್. ರಾಮಪ್ಪ, ಅರುಣಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಸಚಿವ ಆರ್.ಶಂಕರ್, ಹುಬ್ಬಳ್ಳಿ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ್ ಎಸ್. ಖಾದ್ರಿ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಇತರರು ಭಾಗವಹಿಸುವರು ಎಂದರು.

ವಿಶೇಷ ಆಹ್ವಾನಿತರಾಗಿ ದಾವಣಗೆರೆ ಪೂರ್ವವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ, ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಂಶುಕುಮಾರ್, ಗ್ರಾಸಿಂ ಬಿರ್ಲಾ ಕಂಪನಿ ಅಧ್ಯಕ್ಷ ಸೌಮ್ಯಕಾಂತ್ ಮೋಹಂತಿ, ಬೆಂಗಳೂರು ಹೈಕೋರ್ಟ್ ಹಿರಿಯ ನ್ಯಾಯವಾದಿ ಶಂಕರ ಹೆಗಡೆ, ದೊಡ್ಡಬಾತಿ ತಪೋವನದ ಅಧ್ಯಕ್ಷ ಡಾ. ಶಶಿಕುಮಾರ್ ಮೆಹರವಾಡೆ ಪಾಲ್ಗೊಳ್ಳಲಿದ್ದಾರೆ ಎಂದರು.

ವಿಶ್ವಮಾತೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ:

ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್, ಆಚಾರ್ಯ ವ ಮಹಾಚಾರ್ಯ ಸೇವಾ ವಿಭೂಷಣ ಪ್ರಶಸ್ತಿಯನ್ನು ಮೈಸೂರು ಕುಲಪತಿ ಡಾ. ಶರಣಬಸಪ್ಪ ದಿ. ಹಲಸೆ, ಇವರಿಗೆ ಶ್ರೀಮಠದಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಗ್ರಾಪಂ ಸದಸ್ಯ ಕರಿಯಪ್ಪ ಮ್ಯಾಳಗೇರ್, ಹಿರೇಮಠ ಕುಮಾರಸ್ವಾಮಿ. ರವೀಂದ್ರ ಪಾಟೀಲ್ ಸೇರಿದಂತೆ ಇತರದಿದ್ದರು.

- - - -11ಎಚ್‍ಆರ್‍ಆರ್06:

ಪತ್ರಿಕಾಗೋಷ್ಠಿಯಲ್ಲಿ ಬಾಲಯೋಗಿ ಜಗದೀಶ್ವರ ಶ್ರೀ ತುಂಗಭದ್ರಾರತಿ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ