ಹಂಪಿಯಲ್ಲಿ ತುಂಗಾರತಿ ಮಹೋತ್ಸವ

KannadaprabhaNewsNetwork |  
Published : Feb 01, 2024, 02:07 AM IST
31ಎಚ್‌ಪಿಟಿ6- ಹಂಪಿಯಲ್ಲಿ ಬುಧವಾರ ರಾತ್ರಿ ತುಂಗಭದ್ರಾ ನದಿ ತೀರದಲ್ಲಿ ತುಂಗಾರತಿ ನೆರವೇರಿತು. ಶಾಸಕ ಎಚ್‌.ಆರ್‌. ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮತ್ತಿತರರು ಭಾಗವಹಿಸಿದ್ದರು. | Kannada Prabha

ಸಾರಾಂಶ

ತಾಯಿ ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು. ನದಿಯ ಕಲ್ಲುಬಂಡೆಗಳ ಮೇಲೆ ದೀಪಗಳನ್ನು ಬೆಳಗಿಸಲಾಯಿತು

ಹೊಸಪೇಟೆ: ತುಂಗಭದ್ರಾ ನದಿ ತೀರದಲ್ಲಿ ಹಂಪಿ ಉತ್ಸವದ ನಿಮಿತ್ತ ತುಂಗಾರತಿ ಮಹೋತ್ಸವ ಬುಧವಾರ ರಾತ್ರಿ ನಡೆಸಲಾಯಿತು. ವಿಜಯನಗರ ಶಾಸಕ ಎಚ್.ಆರ್‌. ಗವಿಯಪ್ಪ ತುಂಗಭದ್ರಾ ಆರತಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಹಂಪಿ ಉತ್ಸವ ಫೆ. 2,3,4ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತುಂಗಭದ್ರಾ ನದಿ ತಟದಲ್ಲಿ ತುಂಗಾರತಿ ಕೈಗೊಂಡಿತು. ಇದಕ್ಕೂ ಮುನ್ನ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಲೋಕ ಕರ್ಣಾರ್ಥವಾಗಿ ತುಂಗಭದ್ರಾ ನದಿ ದಡದಲ್ಲಿ ಪೂಜೆ ಸಲ್ಲಿಸಲಾಯಿತು.

ತಾಯಿ ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು. ನದಿಯ ಕಲ್ಲುಬಂಡೆಗಳ ಮೇಲೆ ದೀಪಗಳನ್ನು ಬೆಳಗಿಸಲಾಯಿತು. ಕಲಾ ತಂಡಗಳು ಕೂಡ ಪಾಲ್ಗೊಂಡಿದ್ದವು. ಮಾಜಿ ಶಾಸಕ ಎಚ್.ಆರ್. ಶ್ರೀನಾಥ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಎಸ್ಪಿ ಬಿ.ಎಲ್. ಶ್ರೀಹರಿಬಾಬು, ಜಿಪಂ ಸಿಇಒ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಸಿದ್ದಲಿಂಗೇಶ್‌ ರಂಗಣ್ಣವರ್‌ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ದೇಶ-ವಿದೇಶಿ ಪ್ರವಾಸಿಗರು ಕೂಡ ತುಂಗಾರತಿಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ