ತುಮಕೂರು ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು

KannadaprabhaNewsNetwork |  
Published : Oct 28, 2026, 01:15 AM IST
್ಿ್ಿ್ಿ | Kannada Prabha

ಸಾರಾಂಶ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಡಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 20,94,762 ಮತದಾರಿದ್ದಾರೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಡಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 20,94,762 ಮತದಾರಿದ್ದಾರೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿ ಕಚೇರಿಯ ಎನ್‌ಐಸಿ ವೆಬ್‌ಸೈಟ್ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಪ್ರಚುರಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಯಾವುದೇ ನ್ಯೂನತೆಗಳಿದ್ದಲ್ಲಿ, ಹೆಸರು ಬಿಟ್ಟು ಹೋಗಿದ್ದರೆ, ತಿದ್ದುಪಡಿಗಳಿದ್ದಲ್ಲಿ ನಿರಂತರ ಪರಿಷ್ಕರಣೆಯಡಿ ನಿಗದಿತ ನಮೂನೆ-6 7 ಮತ್ತು 8ರಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 10,36,724 ಪುರುಷ, 10,57,981 ಮಹಿಳೆಯರು ಹಾಗೂ 57 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 20,94,762 ಮತದಾರರಿದ್ದು, 18-19 ವರ್ಷದೊಳಗಿನ 15,754 ಪುರುಷರು, 14,543 ಮಹಿಳೆಯರು ಹಾಗೂ 4 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 30,303 ಯುವ ಮತದಾರರು ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಮೂನೆ-7ರಂತೆ ಮತದಾರರ ಪಟ್ಟಿಯಿಂದ 7,248 ಮತದಾರರನ್ನು ಕೈಬಿಡಲಾಗಿದ್ದು, ಈ ಪೈಕಿ 162 ಮರಣ ಹೊಂದಿದ, 25 ಗೈರು, 63 ಈಗಾಗಲೇ ನೋಂದಣಿಯಾದ, 4777 ಸ್ಥಳಾಂತರಗೊಂಡ ಹಾಗೂ 2221 ಇತರೆ ಸೇರಿದಂತೆ ಒಟ್ಟು 7,248 ಮತದಾರರನ್ನು ಕೈಬಿಡಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಅಂತಿಮ ಮತದಾರರ ಪಟ್ಟಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ವಿತರಿಸಲಾಯಿತು.

ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಲ್ಲಿ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಬೇಕು. ನ್ಯೂನತೆ ಕಂಡು ಬಂದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸಭೆಯಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ ಶಾಖೆಯ ನಾಗಭೂಷಣ್ ಸೇರಿದಂತೆ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೋನ್‌ಇನ್‌ನಲ್ಲಿ ಕಸದ ಸಮ್ಯಸ್ಯೆಗಳದ್ದೇ ಸದ್ದು!
ಎಸ್‌ಐಆರ್‌ನಿಂದಾಗಿ ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರುಗಳು ಡಿಲೀಟ್ । ರಾಜಧಾನಿಯಲ್ಲಿ ಬರೀ 59 ಲಕ್ಷ ಮತದಾರರು