ದೇಶದ್ರೋಹ ಘೋಷಣೆ ಪ್ರಕರಣಕ್ಕೆತಿರುವು: ಇಬ್ಬರ ಬಂಧನ

KannadaprabhaNewsNetwork |  
Published : Feb 25, 2026, 03:00 AM IST
24ದೇಶದ್ರೋಹ | Kannada Prabha

ಸಾರಾಂಶ

ಇಲ್ಲಿನ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಂಡ್ಲೂರು ಪೇಟೆಯ ಸೆಲೂನೊಂದರಲ್ಲಿ ಬಾಲಕನೊಬ್ಬ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎನ್ನಲಾದ ಘಟನೆಯ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕುಂದಾಪುರ: ಇಲ್ಲಿನ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಂಡ್ಲೂರು ಪೇಟೆಯ ಸೆಲೂನೊಂದರಲ್ಲಿ ಬಾಲಕನೊಬ್ಬ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎನ್ನಲಾದ ಘಟನೆಯ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಕಟಿಂಗ್ ಶಾಪ್ ಮಾಲೀಕ ಶಶಾಂಕ ಭಂಡಾರಿ (30) ಮತ್ತು ಪ್ರಮೋದ ಡಿಸೋಜ (25) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಿಹಾರ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕ ದೇಶದ್ರೋಹದ ಘೋಷಣೆ ಕೂಗಿದ್ದಾನೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಾಲಕನ ತಂದೆ, ಬಿಹಾರ ಮೂಲದ ಕಾರ್ಮಿಕನು ಸೆಲೂನ್‌ ನಲ್ಲಿ ತನ್ನ ಮಗನಿಂದ ಬಲವಂತವಾಗಿ ಘೋಷಣೆ ಕೂಗಿಸಿ, ಸಾರ್ವಜನಿಕರನ್ನು ಪ್ರಚೋದನೆಗೊಳಿಸಿ ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ದೂರು ನೀಡಿದ್ದರು. ಅದರಂತೆ ಪೊಲೀಸರು ಇಬ್ಬರು ಆರೋಪಿಗಳ‍ನ್ನು ಬಂಧಿಸಿದ್ದಾರೆ.

ಇದೇ ವೇಳೆ ಶಶಾಂಕ್ ಭಂಡಾರಿ ಗುಂಪೊಂದು ತಮ್ಮ ಅಂಗಡಿಗೆ ಬಂದು ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದು, ಅದರಂತೆ ಮತ್ತೊಂದು ಪ್ರಕರಣವನ್ನು ದಾಖಲಿಸಿಕೊಡಿರುವ ಪೊಲೀಸರು ಸುಮಾರು 20-30 ಜನರನ್ನು ಗುರುತಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2 ವರ್ಷದೊಳಗೆ ಪುತ್ತೂರು ದೇವಳ ಬ್ರಹ್ಮಕಲಶ ಗುರಿ: ಅಶೋಕ್‌ ರೈ
ದೇಶಕ್ಕಾಗಿ ರಕ್ತ ಬಲಿದಾನ ನೀಡಿದವರು ಬಿಗ್‌ ಬಾಸ್‌: ದೋ. ಕೇಶವಮೂರ್ತಿ