)
ಕನ್ನಡಪ್ರಭ ವಾರ್ತೆ ಬೆಳಗಾವಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ 1.346 ಕೆ.ಜಿ ಗಾಂಜಾ ಹಾಗೂ ₹1 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಾಳಿ ವೇಳೆ ₹70 ಸಾವಿರ ಮೌಲ್ಯದ 1.346 ಕೆ.ಜಿ ಗಾಂಜಾ ಹಾಗೂ ₹1 ಲಕ್ಷ ಮೌಲ್ಯದ ಕಪ್ಪು ಬಣ್ಣದ ಬಜಾಜ್ ಪಲ್ಸರ್ ಎನ್ಎಸ್-125 ಬೈಕ್ ಸೇರಿದಂತೆ ಒಟ್ಟು ₹1.70 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ವಿಚಾರಣೆ ವೇಳೆ ಆರೋಪಿಗಳು ಗಾಂಜಾವನ್ನು ಖಾನಾಪುರದ ವಿನು ಎಂಬಾತನಿಂದ ತರಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ 3ನೇ ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರಿದಿದೆ.