
ಗದಗ: ತಾಲೂಕಿನ ಹರ್ತಿ ಗ್ರಾಮದಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರ ಬಳಿ ಭಾರತ ಪ್ರವೇಶಕ್ಕೆ ಅಗತ್ಯವಿರುವ ಯಾವುದೇ ಮಾನ್ಯತೆ ಪಡೆದ ವೀಸಾ ಅಥವಾ ಪಾಸ್ ಪೋರ್ಟ್ ದಾಖಲೆಗಳು ಲಭ್ಯವಾಗಿಲ್ಲ. ಇವರು ಗಡಿ ದಾಟಿ ಭಾರತದೊಳಗೆ ಹೇಗೆ ಪ್ರವೇಶಿಸಿದರು. ಇವರಿಗೆ ನಕಲಿ ಗುರುತಿನ ಚೀಟಿಗಳನ್ನು ಒದಗಿಸಲಾಗಿದೆಯೇ ಮತ್ತು ಗದಗಕ್ಕೆ ಇವರನ್ನು ಕರೆತಂದ ಸ್ಥಳೀಯ ಮಧ್ಯವರ್ತಿಗಳು ಅಥವಾ ಗುತ್ತಿಗೆದಾರರು ಯಾರು ಎಂಬಿತ್ಯಾದಿ ಆಯಾಮಗಳಲ್ಲಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.ಇಂದು ಆಂಜನೇಯ ಸ್ವಾಮಿ ದೇವಸ್ಥಾನದ ಕಳಸಾರೋಹಣ
ಮುಂಡರಗಿ: ಪಟ್ಟಣದ ಹೆಸರೂರು ರಸ್ತೆಯಲ್ಲಿರುವ ಭೀಮಾಂಬಿಕಾ ನಗರದ ಆಂಜನೇಯ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ಆ. 22ರಂದು ಬೆಳಗ್ಗೆ 10 ಗಂಟೆಗೆ ಕಳಸಾರೋಹಣ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರುಗಲಿದೆ.ಡಾ. ಅನ್ನದಾನೀಶ್ವರ ಸ್ವಾಮೀಜಿಯವರ ಸಾನ್ನಿಧ್ಯ ವಹಿಸಿ ಕಳಸಾರೋಹಣ ಮಾಡುವರು. ಕಳಸಾರೋಹಣ ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳ ನಂತರ ಎಲ್ಲರಿಗೂ ಮಹಾ ಪ್ರಸಾದದ ವಿತರಣೆ ಜರುಗಲಿದೆ.ಆಶ್ರಯ ಕಾಲನಿಯ ನಿವಾಸಿಗಳು ಹಾಗೂ ಸುತ್ತಮುತ್ತಲಿನ ಸದ್ಭಕ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಳಸಾರೋಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಆಂಜನೇಯ ಸ್ವಾಮಿ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿ ಮತ್ತು ಸ್ಥಳೀಯರು ಪ್ರಕಟಣೆಯಲ್ಲಿ ಕೋರಿದ್ದಾರೆ.21ಎಂಡಿಜಿ2