ಕನ್ನಡಪ್ರಭ ವಾರ್ತೆ ಬೆಳಗಾವಿ
ಮೃತ ಬಾಲಕರನ್ನು ಶಿವಾಜಿ ನಗರದ ನಿವಾಸಿ ಶಿವಂ ಪರಶುರಾಮ ಸುಂಡೀಕರ್(7) ಮತ್ತು ಶಾಹಪುರದ ಜೇಡಗಲ್ಲಿಯ ಪರಶುರಾಮ ರಾಜು ನೀಲಜಕರ (11) ಎಂದು ಗುರುತಿಸಲಾಗಿದೆ. ಬಾಲಕರು ಹೊಂಡದಲ್ಲಿ ಮುಳುಗಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಶೋಧ ಕಾರ್ಯಾಚರಣೆ ಕೈಗೊಂಡರು. ಬಳಿಕ ಬಾಲಕರ ಮೃತದೇಹಗಳನ್ನು ಹೊಂಡದಿಂದ ಹೊರತೆಗೆದರು. ಘಟನಾ ಸ್ಥಳದಲ್ಲಿ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು. ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.