ಜನವರಿ 24ರಿಂದ ಎರಡು ದಿನ ಜಿಲ್ಲಾ ಸಾಹಿತ್ಯ ಸಮ್ಮೇಳನ

KannadaprabhaNewsNetwork |  
Published : Jan 05, 2026, 02:30 AM IST
ಸವಣೂರ ಪಟ್ಟಣದ ಪದ್ಮಶ್ರೀ ವಿ.ಕೃ.ಗೋಕಾಕ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಜರುಗಿದ 15ನೇ ಕಸಾಪ ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿದರು. | Kannada Prabha

ಸಾರಾಂಶ

ಸವಣೂರ ಪಟ್ಟಣದ ಪದ್ಮಶ್ರೀ ವಿ.ಕೃ.ಗೋಕಾಕ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಜರುಗಿದ 15ನೇ ಕಸಾಪ ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿದರು.

ಸವಣೂರು: ಪಟ್ಟಣದಲ್ಲಿ ನಡೆಯಲಿರುವ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ತಾಲೂಕಿನ ಗುಂಡೂರು ಗ್ರಾಮದ ನಿವಾಸಿ, ಬೆಳಗಾವಿ ಅಂಜುಮನ್ ಪದವಿ ಮಹಾವಿದ್ಯಾಲಯ ನಿವೃತ್ತ ಪ್ರಾಚಾರ್ಯ, ಸಾಹಿತಿ ಹಜರೆಸಾಬ್ ಐ. ತಿಮ್ಮಾಪುರ ಅವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಲಿಂಗಯ್ಯ ಹಿರೇಮಠ ಘೋಷಿಸಿದರು.ಪಟ್ಟಣದ ಪದ್ಮಶ್ರೀ ವಿ.ಕೃ.ಗೋಕಾಕ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಜರುಗಿದ 15ನೇ ಕಸಾಪ ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು.ಪದವಿ ಪೂರ್ವ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆ ಇರುವುದರಿಂದ ಜ. 10. ಮತ್ತು 11ರಂದು ಜರುಗಬೇಕಿದ್ದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರಣಾಂತರಗಳಿಂದ ಜ. 24 ಮತ್ತು 25ಕ್ಕೆ ಮುಂದೂಡಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ಜರುಗಬೇಕು. ಕನ್ನಡಾಭಿಮಾನಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು. ವಿದ್ಯಾರ್ಥಿಗಳು ಸಹ ಸಮ್ಮೇಳನದಲ್ಲಿ ಭಾಗವಹಿಸಿ ಕನ್ನಡದ ತೇರನ್ನು ಸವಣೂರು ಪಟ್ಟಣದಲ್ಲಿ ಎಳೆಯಬೇಕೆನ್ನುವ ಉದ್ದೇಶದಿಂದ ಸಮ್ಮೇಳನದ ದಿನಾಂಕವನ್ನು ಬದಲಾಯಿಸಲಾಗಿದೆ. ಮಜೀದ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಮ್ಮೇಳನ ಆಯೋಜನೆಗೆ ಸ್ಥಳ ನಿಗದಿಪಡಿಸಲಾಗಿತ್ತು. ಆದರೆ, ನಿರಂತರವಾಗಿ ವಿದ್ಯಾರ್ಥಿಗಳ ಪರೀಕ್ಷೆ ಬಂದಿರುವದರಿಂದ ಅಲ್ಲಿ ಜರುಗಬೇಕಿದ್ದ ಸಮ್ಮೇಳನವನ್ನು ಪಟ್ಟಣದ ಸುಪ್ರಸಿದ್ಧ ದೊಡ್ಡಹುಣಸೇ ಕಲ್ಮಠದ ಕಲ್ಯಾಣ ಮಂಟಪದಲ್ಲಿ ಸಮಾರಂಭ, ವಾಹನ ನಿಲುಗಡೆಗೆ ಸೇರಿದಂತೆ ವಿವಿಧ ಮಳಿಗೆಗಳನ್ನು ಹಾಕುವಂತಹ ವ್ಯಾಪಾರಸ್ಥರಿಗೆ ಮತ್ತು ವಸ್ತು ಪ್ರದರ್ಶನಕ್ಕೆ ತಾಲೂಕು ಕ್ರೀಡಾಂಗಣವನ್ನು ಗುರುತಿಸಲಾಗಿದೆ. 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಪಟ್ಟಣದ ಭರಮಲಿಂಗೇಶ್ವರ ವೃತ್ತದಿಂದ ಪ್ರಾರಂಭಗೊಂಡು ಪಟ್ಟಣದ ರಾಜ ಬೀದಿಯಲ್ಲಿ ಸಂಚರಿಸಿ ಸಮ್ಮೇಳನ ಸ್ಥಳಕ್ಕೆ ಸಂಪನ್ನಗೊಳ್ಳಲಿದೆ. ಮೆರವಣಿಗೆಯಲ್ಲಿ ಡೊಳ್ಳು, ಜಾಂಜಮೇಳ, ಕೋಲಾಟ, ನೃತ್ಯ, ಗೊಂಬೆಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಿ ಮೆರವಣಿಗೆಗೆ ಮೆರುಗು ನೀಡಲಿವೆ ಎಂದರು.ಕಸಾಪ ತಾಲೂಕು ಘಟಕ ಅಧ್ಯಕ್ಷ ಸಿ.ಎನ್. ಪಾಟೀಲ ಮಾತನಾಡಿ, 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪುಸ್ತಕ ಮಾರಾಟ ಮಳಿಗೆ, ವಸ್ತು ಪ್ರದರ್ಶನ, ಸ್ವದೇಶಿ ಉಡುಗೆ, ದಿನಸಿ ಮಳಿಗೆಗಳನ್ನು ಹಾಕುವಂತಹ ವ್ಯಾಪಾರಸ್ಥರಿಗೆ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ, ವ್ಯಾಪಾರಸ್ಥರು ಮುಂಗಡವಾಗಿ ತಮ್ಮ ಹೆಸರನ್ನು ಕಸಾಪ ತಾಲೂಕು ಘಟಕದಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರಭು ಅರಗೋಳ, ಜಿಲ್ಲಾ ಕೋಶಾಧ್ಯಕ್ಷ ಎಸ್.ಎನ್.ದೊಡ್ಡಗೌಡ್ರ, ಹಾವೇರಿ ತಾಲೂಕು ಕಸಾಪ ಅಧ್ಯಕ್ಷ ವೈ.ಬಿ. ಆಲದಕಟ್ಟಿ, ಬ್ಯಾಡಗಿ ತಾಲೂಕು ಕಸಾಪ ಅಧ್ಯಕ್ಷ ಬಿ.ಎಂ.ಜಗಾಪುರ, ವಿ.ಎಸ್.ಎಸ್. ಬ್ಯಾಂಕ್ ಅಧ್ಯಕ್ಷ ಮಲ್ಲಾರಪ್ಪ ತಳ್ಳಿಹಳ್ಳಿ, ಪ್ರಮುಖರಾದ ಗಂಗಾಧರ ಬಾಣದ, ಹಿರಿಯ ಪತ್ರಕರ್ತ ಜಯತೀರ್ಥ ದೇಶಪಾಂಡೆ, ವಿ.ಎಸ್.ಹಾವಣಗಿ, ಹರೀಶಗೌಡ ಪಾಟೀಲ, ಪರಶುರಾಮ ಈಳಗೇರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ