ಹಾವೇರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಸೆ. 29ರಂದು ಕಚೇರಿಗಳ ಆವರಣ ಹಾಗೂ ಸೆ. 30ರಂದು ಹಾವೇರಿ ನಗರದ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.ಸೆ. 29ರಂದು ಜಿಲ್ಲಾಡಳಿತ ಭವನದ ಎ.ಬಿ. ಹಾಗೂ ಸಿ ಬ್ಲಾಕ್‌ಗಳಲ್ಲಿ ಹಾಗೂ ಜಿಲ್ಲಾ ಪಂಚಾಯತಿ ಕಟ್ಟಡದ ಆವರಣದ ಸ್ವಚ್ಛತೆ ಕಾರ್ಯದಲ್ಲಿ ಜಿಲ್ಲಾಡಳಿತ ಭವದಲ್ಲಿರುವ ಎಲ್ಲ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮದಾನ ಮಾಡಲಿದ್ದಾರೆ.ಸೆ.30ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ನಗರದಲ್ಲಿ ಸಾಮೂಹಿಕ ಶ್ರಮದಾನ ಆಯೋಜಿಸಲಾಗಿದೆ. ಇಜಾರಿಲಕಮಾಪೂರ ಶ್ರೀ ದುಂಡಿಬಸವೇಶ್ವರ ದೇವಸ್ಥಾನದಿಂದ ಜೆ.ಎಚ್. ಪಟೇಲ್ ವೃತ್ತದವರೆಗೆ ಜಿಪಂ, ತಾಪಂ, ಪಂಚಾಯತ್ ರಾಜ್ ಹಾಗೂ ಪಂಚಾಯತ್ ರಾಜ್ ಎಂಜಿನಿಯುರಿಂಗ್ ವಿಭಾಗದ ಮುಖ್ಯಸ್ಥರು ಹಾಗೂ ಎಲ್ಲ ಸಿಬ್ಬಂದಿಗಳು, ಜೆ.ಎಚ್. ಪಟೇಲ್ ವೃತ್ತದಿಂದ ವಿ.ಕೃ. ಗೋಕಾಕ (ಗುರುಭವನ)ವೃತ್ತವರೆಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಜೆ.ಎಚ್.ಪಟೇಲ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪರಿಸರ ಹಾಗೂ ಮಾಲಿನ್ಯ ನಿಯಂತ್ರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಸವೇಶ್ವರ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ನಗರದ ಹಾಸ್ಟೆಲ್ ವಾರ್ಡ್‌ನಗಳು, ಕಾರ್ಮಿಕ ಇಲಾಖೆ, ನೋಂದಣಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಗಾಂಧಿ ಭವನದ ಮಾರ್ಗವಾಗಿ ಗುತ್ತಲ ರಸ್ತೆಯ ಅಂಡರ್ ಬ್ರಿಡ್ಜ್‌ವರೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಹಾಸ್ಟೇಲ್ ವಾರ್ಡ್ನ್‌ಗಳು, ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ವಿ.ಕೃ.ಗೋಕಾಕ ವೃತ್ತದಿಂದ ಜೆ.ಪಿ ವೃತ್ತದವರೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು, ವಸತಿ ನಿಲಯಗಳ ವಾರ್ಡ್‌ನಗಳು, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜೆ.ಪಿ. ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೆ ಡಾ.ಬಿ.ಆರ್. ಅಂಬೇಡ್ಕರ್ ನಿಗಮ ಸೇರಿದಂತೆ ಎಲ್ಲ ನಿಗಮಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಗಾಂಧಿ ವೃತ್ತದಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಹುಕ್ಕೇರಿಮಠದವರೆಗೆ ಕೃಷಿ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಗಾಂಧಿ ವೃತ್ತದಿಂದ ಮೈಲಾರ ಮಹದೇವಪ್ಪ ವೃತ್ತದವರೆಗೆ ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜೆ.ಪಿ. ವೃತ್ತದಿಂದ ಮಾರುಕಟ್ಟೆ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ, ಉದ್ಯೋಗ ವಿನಿಮಯ ಹಾಗೂ ಪಶು ಪಾಲನೆ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಹೊಸಮನಿ ಸಿದ್ದಪ್ಪ ವೃತ್ತದಿಂದ ಸಂಗೂರ ಕರಿಯಪ್ಪ ವೃತ್ತದವರೆಗೆ ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಆಯುಷ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ರೆಡ್ ಕ್ರಾಸ್, ನರ್ಸಿಂಗ್ ಕಾಲೇಜ್ ಪ್ರಾಚಾರ್ಯರು ಹಾಗೂ ವಿದ್ಯಾರ್ಥಿಗಳು, ಸಂಗೂರ ಕರಿಯಪ್ಪ ವೃತ್ತದಿಂದ ಪುರಸಿದ್ದೇಶ್ವರ ದೇವಸ್ಥಾನದವರೆಗೆ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಹೆಸ್ಕಾಂ ಅಧಿಕಾರಿಗಳು, ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು, ಹೊಸಮನಿ ಸಿದ್ದಪ್ಪ ವೃತ್ತದಿಂದ ಹಾನಗಲ್ ರಸ್ತೆ ಎಪಿಎಂಸಿ ವರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ನಗರ ಹಾಗೂ ಗ್ರಾಮೀಣ ಠಾಣೆ, ಜಿಲ್ಲಾ ಅಂಕಿ-ಸಂಖ್ಯೆ, ಭೂ ದಾಖಲೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಹೊಸಮನಿ ಸಿದ್ದಪ್ಪ ವೃತ್ತದಿಂದ ಕಿತ್ತೂರ ಚನ್ನಮ್ಮ ವೃತ್ತದವರೆಗೆ (ಶಹರ ಪೊಲೀಸ್ ಠಾಣೆ) ಜಿಲ್ಲಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರ ಕಚೇರಿ, ಉಪ ಅರಣ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಮುದ್ರಣ ಹಾಗೂ ವಿದ್ಯಾನ್ಮಾನ ಜಿಲ್ಲಾ ಮಟ್ಟದ ಪ್ರತಿನಿಧಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಕಿತ್ತೂರ ಚನ್ನಮ್ಮ ವೃತ್ತದಿಂದ ಮಹರ್ಷಿ ವಾಲ್ಮೀಕಿ ವೃತ್ತದವರೆಗೆ ಅಬಕಾರಿ ಇಲಾಖೆ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲಾ ಸಮಾದೇಷ್ಟರು, ಹೋಂ ಗಾಡ್ಸ್, ಸ್ಕೌಟ್ಸ್ ಆಂಡ್ ಗೈಡ್ಸ್‌ನವರು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಬಾಲಭವನದ ಉದ್ಯಾನವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಕ್ಕಳ ರಕ್ಷಣಾ ಘಟಕದದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಜಿಲ್ಲಾ ಕ್ರೀಡಾಂಗಣ ಒಳಾಂಗಣ ಹಾಗೂ ಹೊರ ಆವರಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಗಾಂಧಿಪುರ ಪದವಿ ಕಾಲೇಜು, ಇಂಜನಿಯರಿಂಗ್ ಕಾಲೇಜ್ ಹಾಗೂ ಹಾವೇರಿ ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.ಪುರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಪದವಿ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳು ಶ್ರಮದಾನದಲ್ಲಿ ಭಾಗವಹಿಸಲಿದ್ದಾರೆ.