ಕುಂದಾಪುರ: ಬಟ್ಟೆ ತೊಳೆಯಲೆಂದು ಕೆರೆಗೆ ಹೋದ ಇಬ್ಬರು ಶಾಲಾ ಬಾಲಕಿಯರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಜೆ ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಯಲ್ಲಿ ಸಂಭವಿಸಿದೆ.
ಭಾನುವಾರ ಸಂಜೆ ಸುಮಾರು 4 ಗಂಟೆಗೆ ಜೋಪಡಿಯ ಐವರು ಮಕ್ಕಳು ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಸುನೀತಾ ಹಾಗೂ ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ತಂಡ, ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲಕ್ಕೆತ್ತಲು ಸಹಕರಿಸಿದರು. ಬಳಿಕ ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್‌ನ ಆಂಬುಲೆನ್ಸ್ ಹಾಗೂ ಎಮ್ಎಚ್ಐ ಆಂಬುಲೆನ್ಸ್ ನಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.