ಇಬ್ಬರು ಅಂತರ್‌ ಜಿಲ್ಲಾ ಕಳ್ಳರ ಬಂಧನ

KannadaprabhaNewsNetwork |  
Published : Mar 27, 2025, 01:10 AM IST
ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ   ಓಜಿಕುಪ್ಪಂ ಗ್ಯಾಂಗ್ ನ ಇಬ್ಬರು ಕುಖ್ಯಾತಿ ಕಳ್ಳರನ್ನು ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. | Kannada Prabha

ಸಾರಾಂಶ

ಗುಬ್ಬಿ: ಹಾಡಹಗಲೇ ಕಾರಿನ ಕಿಟಕಿ ಒಡೆದು ಕಾರಿನಲ್ಲಿದ್ದ 15 ಲಕ್ಷ ದೋಚಿದ್ದ ಕಳ್ಳರನ್ನು ಗುಬ್ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಬ್ಬಿ: ಹಾಡಹಗಲೇ ಕಾರಿನ ಕಿಟಕಿ ಒಡೆದು ಕಾರಿನಲ್ಲಿದ್ದ 15 ಲಕ್ಷ ದೋಚಿದ್ದ ಕಳ್ಳರನ್ನು ಗುಬ್ಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ವಿವಿಧ ಪ್ರಕರಣಗಳು ಸೇರಿ ಒಟ್ಟು 16 ಲಕ್ಷ ರು. ಮೌಲ್ಯದ ನಗದು ಹಾಗೂ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಆಂಧ್ರ ಮೂಲದ ಶಿವ(44) ಹಾಗೂ ಸುಬ್ರಹ್ಮಣ್ಯ ಅಲಿಯಾಸ್ ಮಣಿ (38) ಎಂದು ಗುರುತಿಸಲಾಗಿದೆ. ಈ ಆರೋಪಿತರು ಅಂತರ್ ಜಿಲ್ಲಾ ರಾಜ್ಯ ಅಪರಾಧಿಗಳಾಗಿದ್ದು ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಾದ ಗುಬ್ಬಿಯಲ್ಲಿ ಒಂದು ಪ್ರಕರಣ , ಸಿರಾ ದಲ್ಲಿ ಎರಡು ಪ್ರಕರಣ, ಚಿಕ್ಕನಾಯಕನಹಳ್ಳಿಯಲ್ಲಿ ಒಂದು ಪ್ರಕರಣ, ನೊಣವಿನಕೆರೆ ವ್ಯಾಪ್ತಿಯಲ್ಲಿ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಿರಾ ಉಪ ವಿಭಾಗದ ಡಿವೈಎಸ್ಪಿ ಶೇಖರ್ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತ ನಿರೀಕ್ಷಕರಾದ ರಾಘವೇಂದ್ರ ಅವರ ನೇತೃತ್ವದಲ್ಲಿ ಸಬ್ ಇನ್ಸಪೆಕ್ಟರ್ ಸುನಿಲ್ ಕುಮಾರ್ ಸೇರಿದಂತೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು