ಕನ್ನಡಪ್ರಭವಾರ್ತೆ, ಹಾಸನ
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನಕ್ಕೆ ಐಐಟಿ ಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಈ ಉದ್ದೇಶಕ್ಕಾಗಿ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಇಂದಿಗೂ ಐಐಟಿ ಸ್ಥಾಪನೆಯಾಗಿಲ್ಲ. ಇತ್ತ ರೈತರ ಭೂಮಿಯನ್ನೂ ವಾಪಸ್ ನೀಡಿಲ್ಲ. ಹೀಗಾಗಿ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿಯ ಹಿತದೃಷ್ಟಿಯಿಂದ ಐಐಟಿ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಐಐಟಿ ಹಾಸನಕ್ಕೆ ಬಂದರೆ ಯಾವುದೇ ರಾಜಕೀಯ ಭೇದವಿಲ್ಲದೆ ಸ್ವಾಗತಿಸುತ್ತೇವೆ. ಇಲ್ಲದಿದ್ದರೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗಲಿದೆ ಎಂದು ಹೇಳಿದರು.
ಐಐಟಿ ವಿಚಾರದಲ್ಲಿ ಯಾರನ್ನೂ ದೂಷಿಸುವ ಉದ್ದೇಶವಿಲ್ಲ. ಆದರೆ, ಅಧಿಕಾರದಲ್ಲಿರುವವರು ಜಿಲ್ಲೆಯ ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕು. ಪ್ರಹ್ಲಾದ್ ಜೋಶಿ ಅವರು ಈ ಹಿಂದೆ ಐಐಟಿಯನ್ನು ಬೇರೆಡೆಗೆ ತೆಗೆದುಕೊಂಡು ಹೋಗಲಿಲ್ಲವೇ? ಅದೇ ರೀತಿ ಹಾಸನಕ್ಕೂ ಐಐಟಿ ತರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ ಬೇಡ:ಬೇಲೂರು ಭಾಗದಲ್ಲಿ ಕಾಡಾನೆಗಳ ಸಮಸ್ಯೆ ತೀವ್ರವಾಗಿದ್ದು, ಜನರು ಹಾಗೂ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ೧.೨೪ ಲಕ್ಷ ಎಕರೆ ವ್ಯಾಪ್ತಿಯ ಭದ್ರಾ ಅಭಯಾರಣ್ಯಕ್ಕೆ ಆನೆಗಳನ್ನು ಸ್ಥಳಾಂತರಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಎರಡು ಆನೆಗಳನ್ನು ಸೆರೆಹಿಡಿಯಲಾಗಿದೆ. ಆದರೆ, ಈ ಕ್ರಮದ ಬಗ್ಗೆ ಕೆಲವರು ತಪ್ಪು ಗ್ರಹಿಕೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ಸಚಿವ ಶಿವಲಿಂಗೇಗೌಡ ಹೇಳಿದರು.ಬೇಲೂರು ಭಾಗದಲ್ಲಿ ಹೇಳಿಕೊಳ್ಳುವಂತಹ ಅರಣ್ಯ ಪ್ರದೇಶವೇ ಇಲ್ಲ. ಕನಿಷ್ಠ ನೂರು ಎಕರೆ ಕಾಡು ಇಲ್ಲದ ಪರಿಸ್ಥಿತಿಯಲ್ಲಿ ಕಾಡಾನೆಗಳು ಅಲ್ಲಿ ಹೇಗೆ ನೆಲೆಸಲು ಸಾಧ್ಯ? ಆನೆಗಳು ಕಾಡಿನಲ್ಲಿರಬೇಕೇ ಹೊರತು ಜನವಸತಿ ಪ್ರದೇಶಗಳಲ್ಲಿ ಅಲ್ಲ. ಕಾನೂನಿನ ಪ್ರಕಾರ ಕಾಡಾನೆಗಳಿಗೆ ಅಭಯಾರಣ್ಯವೇ ಸೂಕ್ತ ನೆಲೆ. ಹೀಗಾಗಿ ಅವುಗಳನ್ನು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆನೆಗಳ ಸ್ಥಳಾಂತರ ಕುರಿತು ಅರಣ್ಯ ಸಚಿವರು ನವೆಂಬರ್ ೩೦ರಂದು ಸಭೆ ಕರೆದಿದ್ದಾರೆ. ಸ್ಥಳಾಂತರದಿಂದ ತೊಂದರೆಯಾಗುತ್ತದೆ ಎನ್ನುವವರು ತಮ್ಮ ಆತಂಕ ಮತ್ತು ಸಮಸ್ಯೆಗಳನ್ನು ಆ ಸಭೆಯಲ್ಲಿ ನೇರವಾಗಿ ಸಚಿವರ ಗಮನಕ್ಕೆ ತರಲಿ. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಆನೆಗಳನ್ನು ಸ್ಥಳಾಂತರಿಸುವ ಆದೇಶವನ್ನು ನಾವು ನೀಡಿಲ್ಲ, ಅರಣ್ಯ ಸಚಿವರು ಹಾಗೂ ಇಲಾಖೆ ಈ ಕ್ರಮ ಕೈಗೊಂಡಿವೆ ಎಂದು ಸ್ಪಷ್ಟಪಡಿಸಿದರು.
ಇದೆ ವೇಳೆ ಸಂಸದ ಶ್ರೇಯಸ್ ಎಂ. ಪಟೇಲ್, ಮಾಜಿ ಸಚಿವ ಬಿ. ಶಿವರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿಧರ್, ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ ಇತರರು ಇದ್ದರು.ಪಕ್ಕದಲ್ಲೇ ಬಿ. ಶಿವರಾಂ