ಇಬ್ಬರು ತಿಪಟೂರು ಪೊಲೀಸರ ವಶಕ್ಕೆ

KannadaprabhaNewsNetwork |  
Published : Nov 06, 2023, 12:46 AM IST

ಸಾರಾಂಶ

tiptooru policemen

ಶಿವಮೊಗ್ಗ: ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್‌ಗಳು ಪತ್ತೆ ಪ್ರಕರಣಕ್ಕೆ ಸಂಬಂಧ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಭದ್ರಾವತಿ ಮೂಲದ ನಸ್ರುಲ್ಲಾ ಮತ್ತು ತಿಪಟೂರಿನ ಗಾಂಧಿನಗರದ ಜಬ್ಬಿ ಎಂಬವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.‌ಜಬ್ಬಿ ಮತ್ತು ನಸ್ರುಲ್ಲಾ ಇಬ್ಬರೂ ಸ್ನೇಹಿತರು. ಹಲವು ದಿನಗಳ ಹಿಂದೆ ತಿಪಟೂರು ಪಟ್ಟಣಕ್ಕೆ ನಸ್ರುಲ್ಲಾ ಬಂದಿದ್ದನು. ಶನಿವಾರ ತುಮಕೂರಿನಿಂದ ಶಿವಮೊಗ್ಗಕ್ಕೆ ತನ್ನ ಕಾರಿನಲ್ಲೆ ನಸ್ರುಲ್ಲಾನು ಜಬ್ಬಿ ಜೊತೆ ಬಂದಿದ್ದ ಎನ್ನಲಾಗಿದೆ. ಸದ್ಯ ತಿಪಟೂರು ನಿಗೂಢ ಸ್ಥಳದಲ್ಲಿ ಇವರಿಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ