ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಪಟ್ಟಣದ ನಿವಾಸಿ ಮಹಮ್ಮದ್ ಸಲೀಂ ಎಂಬವರು ಚಲಿಸುತ್ತಿದ್ದ ಹೋಂಡಾ ಕಾರು ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ಸಿಬ್ಬಂದಿ ಅರುಣ್ ಎಂಬವರು ಚಲಿಸುತ್ತಿದ್ದ ಸ್ಯಾಂಟ್ರೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಯಾಂಟ್ರೋ ಕಾರಿನಲ್ಲಿದ್ದ ಅರುಣ್ ಹಾಗೂ ಮೂರ್ತಿ ಅವರ ತಲೆ ಭಾಗಕ್ಕೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೋಂಡ ಕಾರಿನಲ್ಲಿದ್ದ ಸಲೀಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ ನಂತರ ಈರ್ವರು ಪೊಲೀಸರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಮುದ್ದುಮಹದೇವ, ಎಎಸ್‌ಐ ಪ್ರವೀಣ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು, ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.