ಗೂಂಡಾ ಕಾಯ್ದೆಯಡಿ ಇಬ್ಬರು ರೌಡಿಗಳ ಬಂಧನ

KannadaprabhaNewsNetwork |  
Published : Nov 30, 2026, 04:00 AM IST
ಕನ್ನಡ ಪ್ರಭ ಚಿತ್ರ ದಿ 28 ಎಂಬಿಆರ್: | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಕೈಗೊಂಡ ಕಾರ್ಯಾಚರಣೆಯಲ್ಲಿ ಇಬ್ಬರು ಕುಖ್ಯಾತ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ.ಕೆ ಅವರು ನ.28ರಂದು ಕರ್ನಾಟಕ ಗೂಂಡಾ ಕಾಯ್ದೆ-1985ರ ಕಲಂ 3(1)(2)ರ ಅಡಿಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪ್ರತಿಬಂಧಕ ಬಂಧನದ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದರು.ಈ‌ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಬಂಧಿತ ಭೀಮಾಶಂಕರ ಅಲಿಯಾಸ್ ಸುಧೀರ ಕ್ಷತ್ರಿ(31) ಇಂಡಿ ತಾಲೂಕಿನ ಬರಗುಡಿ ಗ್ರಾಮದ ನಿವಾಸಿಯಾಗಿದ್ದು, ಈತ ಕಳೆದ 13 ವರ್ಷಗಳಿಂದ ಇಂಡಿ ಗ್ರಾಮೀಣ, ಝಳಕಿ, ಹೊರ್ತಿ ಹಾಗೂ ಕೊಪ್ಪಳ ಶಹರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ, ಕೊಲೆಗೆ ಯತ್ನ, ದರೋಡೆಗೆ ಸಂಚು, ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಮತ್ತು ಮಾರಕಾಸ್ತ್ರ ಹೊಂದಿರುವುದು ಹಾಗೂ ಅಕ್ರಮ ಮದ್ಯ ಮಾರಾಟ ಸೇರಿದಂತೆ ಒಟ್ಟು 8 ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. 2020ರ ಸೆ.3ರಂದು ಈತನ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು. ಸದ್ವರ್ತನೆಗಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದರೂ, ಅದನ್ನು ಉಲ್ಲಂಘಿಸಿ 2026ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾನೆ. ಸದ್ಯ ಈತನನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.ಮತ್ತೊಬ್ಬ ಆರೋಪಿ ಸತೀಶ ಅಲಿಯಾಸ್ ಠಾಕೂರ ಚವ್ಹಾಣ(32) ಇಂಡಿ ತಾಲೂಕಿನ ಹಿಟ್ನಳ್ಳಿ ತಾಂಡಾ ಮೂಲದವನಾಗಿದ್ದು, ಈತ ನಗರದ ಆದರ್ಶನಗರದಲ್ಲಿ ನಿವಾಸಿ. ಕಳೆದ 8 ವರ್ಷಗಳಿಂದ ವಿಜಯಪುರದ ಆದರ್ಶನಗರ, ಗಾಂಧಿಚೌಕ್, ಮಹಿಳಾ ಪೊಲೀಸ್ ಠಾಣೆ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ, ಕೊಲೆಗೆ ಯತ್ನ, ಅತ್ಯಾಚಾರ, ಸುಲಿಗೆ, ದರೋಡೆ, ಜೈಲಿನಿಂದಲೇ ಬೆದರಿಕೆ ಕರೆ, ಗಂಭೀರ ಗಾಯ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಒಟ್ಟು 7 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತ 2020ರ ಅ.14ರಂದು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿ ಶೀಟ್ ತೆರೆಯಲಾಗಿತ್ತು. ಮುಚ್ಚಳಿಕೆ ಉಲ್ಲಂಘಿಸಿ 2026ರಲ್ಲಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಭೀರ ಅಪರಾಧ ಕೃತ್ಯ ಎಸಗಿದ್ದಾನೆ. ಸದ್ಯ ಈತನನ್ನು ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ.-----ಕೋಟ್‌ನಿರಂತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೌಡಿಗಳು ಹಾಗೂ ಸಮಾಜಘಾತುಕ ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ನಿಗಾ ಇರಿಸಿದೆ. ಈ ಹಿನ್ನಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.ಲಕ್ಷ್ಮಣ ನಿಂಬರಗಿ, ಜಿಲ್ಲಾ ಪೊಲೀಸ್ ಅಧೀಕ್ಷಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಸ್ತೇಜನಗೊಂಡ ಗ್ರಾಮೀಣ ಗ್ರಂಥಾಲಯಗಳು !
ಪ್ರತಿಯೊಬ್ಬ ಕನ್ನಡಿಗ ನಾಡಿನ ಕಾವಲುಗಾರನಾಗಬೇಕಿದೆ: ಚಲಪತಿ ಗೌಡ