ಕನ್ನಡಪ್ರಭ ವಾರ್ತೆ ನಾಪೋಕ್ಲು
ಕೊಟ್ಟಮುಡಿಯಲ್ಲಿ ರಸ್ತೆ ಬದಿ ನಿಂತಿದ್ದ ಜೀಪಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಾಳು ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ.
ಹೊದವಾಡ ಗ್ರಾಮದ ನಿವಾಸಿ ಎಂ.ಎಂ ಅಬ್ದುಲ್ಲಾ (51) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರು. ಕಾರು ಡಿಕ್ಕಿಯಾದ ಪರಿಣಾಮ ಅಬ್ದುಲ್ಲಾ ಅವರ ಸೊಂಟದ ಭಾಗಕ್ಕೆ ಏಟಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹೊದವಾಡದ ಅಬ್ದುಲ್ ಆಝೀಜ್ ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಕಾರು ಆಟೋ ನಡುವೆ ಕೊಟ್ಟಮುಡಿ ಜಂಕ್ಷನ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆಟೋ ಚಾಲಕ ಎನ್.ಸಿ ಕುಟ್ಟಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು ಮಡಿಕೇರಿಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೋ ಜಖಂಗೊಂಡಿದೆ.