- ಅರಿವಿನ ಅಂಗಳದಲ್ಲಿ ಸರ್ಕಾರಿ ಯೋಜನೆಗಳ ಅರಿವು ಕಾರ್ಯಕ್ರಮ, ಪಂಚಾಯಿತಿ ಕಟ್ಟೆ ಜನರ ಸಮಸ್ಯೆ ಆಲಿಸಿ ಪರಿಹರಿಸಲು ಕ್ರಮ
ಜಿಪಂನಿಂದ ಅರಿವಿನ ಅಂಗಳ ಹಾಗೂ ಪಂಚಾಯಿತಿ ಕಟ್ಟೆ ಎಂಬ ಎರಡು ವಿನೂತನ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಿವಿನ ಅಂಗಳ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಅರಿವು ಮೂಡಿಸಲಾಗುವುದು. ಪಂಚಾಯಿತಿ ಕಟ್ಟೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅಲ್ಲಿಯೇ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಪಿಡಿಒಗಳಿಗೆ ಅರಿವಿನ ಅಂಗಳ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಕಾರ್ಯಾಗಾರ ಆಯೋಜಿಸಲಾಗುವುದು. ಈ ಕಾರ್ಯಾಗಾರದಲ್ಲಿ ಆರ್ ಡಿಪಿಆರ್, ನರೇಗಾ, ಇ ಸ್ವತ್ತು, ಎನ್ ಆರ್ ಎಲ್ಎಂ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು. ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಪ್ರಾಯೋಗಿಕವಾಗಿ ಮೂಡಿಗೆರೆ ತಾಲೂಕಿನಲ್ಲಿ ಈ ಕಾರ್ಯಕ್ರಮ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದು, ಇದೀಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿ ಮೀನಾ ನಾಗರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.--- ಬಾಕ್ಸ್ ----ಒಂಬತ್ತು ದಿನದಲ್ಲಿ 7.29 ಕೋಟಿ ತೆರಿಗೆ ವಸೂಲಿ
ಡಿ. 1ರಿಂದ 9ರವರೆಗೆ ಜಿಲ್ಲೆಯ ಜನತಾ ವಿಶೇಷ ಅಭಿಯಾನ ಕೈಗೊಳ್ಳಲಾಗಿತ್ತು. ಇದರಲ್ಲಿ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 1.81 ಕೋಟಿ ರು. ತೆರಿಗೆ ಸಂಗ್ರಹವಾದರೆ, ಚಿಕ್ಕಮಗಳೂರು ತಾಲೂಕಿನಲ್ಲಿ 1.68 ಕೋಟಿ ರು. ತೆರಿಗೆ ಸಂಗ್ರಹವಾಗಿದೆ. ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಗ್ರಾಪಂ ವ್ಯಾಪ್ತಿಯಲ್ಲಿ ಬರೋಬ್ಬರಿ 20.25ಲಕ್ಷ ರು. ತೆರಿಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.
----------ನರೇಗಾದಲ್ಲಿ ಪ್ರಗತಿ
ಮುಂದಿನ ದಿನಗಳಲ್ಲಿಯೂ ಇದೇ ರೀತಿ ಅಭಿಯಾನದ ಮೂಲಕ ನರೇಗಾ ಯೋಜನೆ ಅಡಿ ಹೆಚ್ಚಿನ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.