ಬೇಲೂರಲ್ಲಿ ೨೦೮೧ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾಹಿತಿ

KannadaprabhaNewsNetwork |  
Published : Mar 21, 2024, 01:10 AM IST
20ಎಚ್ಎಸ್ಎನ್14 : ಬೇಲೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಪಿ ನಾರಾಯಣ್. | Kannada Prabha

ಸಾರಾಂಶ

ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದ್ದು ಅರಸೀಕೆರೆಯಲ್ಲಿ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ತಿಳಿಸಿದರು.

ಪರೀಕ್ಷಾ ಪೂರ್ವ ಸಿದ್ಧತೆ ಪರಿಶೀಲನೆ । ಏಳು ಕೇಂದ್ರಗಳಲ್ಲಿ ಪರೀಕ್ಷೆಕನ್ನಡಪ್ರಭ ವಾರ್ತೆ ಬೇಲೂರು

ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದ್ದು ತಾಲೂಕಿನಲ್ಲಿ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ತಿಳಿಸಿದರು.

ಪರೀಕ್ಷಾ ಪೂರ್ವ ಸಿದ್ಧತೆಯ ನಂತರ ಮಾತನಾಡಿದ ಅವರು, ೨೦೨೩-೨೪ ನೇ ಸಾಲಿನಲ್ಲಿ ತಾಲೂಕಿನಾದ್ಯಂತ ಒಟ್ಟು ೭ ಪರೀಕ್ಷಾ ಕೇಂದ್ರಗಳಲ್ಲಿ ಗಂಡುಮಕ್ಕಳು ೯೪೮, ಹೆಣ್ಣುಮಕ್ಕಳು ೧೦೭೦ ಹಾಗೂ ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳು ೬೩ ಸೇರಿದಂತೆ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಸ್ನೇಹಿಯಾಗಿ, ಭಯಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಿಗೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಅಣಕು ಪರೀಕ್ಷೆಯನ್ನು ಮಾ.೨೧ ರಂದು ನಡೆಸಲಾಗುತ್ತಿದೆ. ಎಲ್ಲಾ ವಿದ್ಯಾರ್ಥಿಗಳು ಆ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಅಣಕು ಪರೀಕ್ಷೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಇದಕ್ಕೆ ತಾಲೂಕು ಮಟ್ಟದ ಎಲ್ಲಾ ಶಿಕ್ಷಕ ವೃಂದದವರನ್ನು ಸೇರಿಸಿ ಪರೀಕ್ಷಾ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ತಾಪಂ, ಕೆಎಸ್‌ಆರ್‌ಟಿಸಿ, ಆರಕ್ಷಕ ವೃತ್ತ ನಿರೀಕ್ಷಕರು, ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಸಹಕಾರ ಕೋರಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಸುಮಾರು ೨೦೦ ಮೀಟರ್ ವ್ಯಾಪ್ತಿಯ ನಿಷೇಧಾಜ್ಞೆ ಜಾರಿಗೊಳಿಸಲು ಕೋರಿದ್ದು ಹಾಗೂ ಪರಿಕ್ಷಾ ನಕಲು ತಡೆಗಟ್ಟುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಇರುವಂತಹ ಜೆರಾಕ್ಸ್ ಅಂಗಡಿ ಮುಚ್ಚಲು ಕೋರಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಿದ್ದು ಯಾವುದೇ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯದಂತೆ ಎಚ್ಚರಿಕೆ ವಹಿಸಲಾಗಿದೆ‌. ಗ್ರಾಮೀಣ ಪ್ರದೇಶಗಳಲ್ಲಿ ಬರುವಂತ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಮಾ.೨೫ ರಿಂದ ಏಪ್ರಿಲ್ ೬ ರವರೆಗೆ ಪರೀಕ್ಷೆ ನಡೆಯುವುದರಿಂದ ಭಯಮುಕ್ತರಾಗಿ ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ತಿಂಗಳ ಗುರಿ ೫ ಎಂಬ ೬ ಸರಣಿ ಪುಸ್ತಕಗಳನ್ನು ತರುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ನೀಡಿದ್ದು ಇದರಿಂದ ಅವರ ಅಂಕಗಳಿಕೆಯಲ್ಲಿ ಸಾಧನೆ ಮಾಡುವ ಮೂಲಕ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಲಿ ಎಂಬ ಉದ್ದೇಶದಿಂದ ಎಲ್ಲಾ ಶಿಕ್ಷಕ ವೃಂದದವರ ಸಹಕಾರದಿಂದ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ವಿಶೇಷ ತರಬೇತಿ ನೀಡಲಾಗಿದೆ ಎಂದರು.ಬೇಲೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?