ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

KannadaprabhaNewsNetwork |  
Published : Nov 17, 2024, 01:19 AM ISTUpdated : Nov 17, 2024, 12:33 PM IST
16ಲಂಚ | Kannada Prabha

ಸಾರಾಂಶ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

 ಉಡುಪಿ : ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರಿಗೆ ಅವರ ಪೆನ್ಶನ್ ಹಣವನ್ನು ನೀಡಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು, 5000 ರು. ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಹಿತೇಂದ್ರ ಭಂಡಾರಿಯವರ ದೂರಿನಂತೆ ಶನಿವಾರ ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಅವರ ತಂಡ ಹಾಗೂ ಮಂಗಳೂರು ಲೋಕಾಯುಕ್ತ ಪಿಐಪಿ ಸುರೇಶ್ ಹಾಗೂ ಕೆ.ಎನ್. ಚಂದ್ರಶೇಖರ್ ಅವರನ್ನೊಳಗೊಂಡ ತಂಡ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ನಾಗರಾಜ, ಸತೀಶ್, ಪ್ರಸನ್ನ, ರಮೇಶ್, ಸೂರಜ್, ಸುಧೀರ್, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!