ಈಜಲು ಹೋಗಿ ಇಬ್ಬರು ಯುವಕರ ಸಾವು

KannadaprabhaNewsNetwork |  
Published : Feb 15, 2026, 02:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ.

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ.

ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ಧೈವಿಗಳು. ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು ಎಂದು ತಿಳಿದುಬಂದಿದೆ.ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರ ಮನೆಗೆ ಬಂದಿದ್ದ. ಅಲ್ಲಿಂದ ಯೋಗೀಶ್ ಹಾಗೂ ಅಭಿಷೇಕ್ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಿದ ಪೊಲೀಸರು ನಾಳೆ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌; ಕಾಂಗ್ರೆಸ್‌ ಪ್ರತಿಭಟನೆ
ಇಳಕಲ್ಲ ಪೊಲೀಸ್ ಠಾಣೆಗೆ ಐಜಿಪಿ ಸಂದೀಪ್ ಪಾಟೀಲ್ ಭೇಟಿ