ನಗರದ ಹೃದಯ ಭಾಗವಾದ ಭುವನೇಶ್ವರಿ ವೃತ್ತದಲ್ಲಿ ಯಾವುದೇ ರೀತಿಯ ಫ್ಲೆಕ್ಸ್ ಮತ್ತು ಬಂಟಿಂಗ್ಸ್‌ಗಳನ್ನು ಹಾಕುವುದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಇನ್ನು ಮುಂದೆ ಈ ಸರ್ಕಲ್‌ನಲ್ಲಿ ಫ್ಲೆಕ್ಸ್ ಅಳವಡಿಸಿದರೆ ಕಾನೂನು ರೀತಿ ಕ್ರಮ ವಹಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ತಿಳಿಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಫ್ಲೆಕ್ಸ್ ಅಳವಡಿಕೆಗೆ ನಿಷೇಧ ಹೇರಿಕೆ
ಬೇರೆ ಕಡೆಗಳಲ್ಲಿ ಅಳವಡಿಕೆಗೆ ಅನುಮತಿ, ಶುಲ್ಕ ಪಾವತಿ ಕಡ್ಡಾಯ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಹೃದಯ ಭಾಗವಾದ ಭುವನೇಶ್ವರಿ ವೃತ್ತದಲ್ಲಿ ಯಾವುದೇ ರೀತಿಯ ಫ್ಲೆಕ್ಸ್ ಮತ್ತು ಬಂಟಿಂಗ್ಸ್‌ಗಳನ್ನು ಹಾಕುವುದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಇನ್ನು ಮುಂದೆ ಈ ಸರ್ಕಲ್‌ನಲ್ಲಿ ಫ್ಲೆಕ್ಸ್ ಅಳವಡಿಸಿದರೆ ಕಾನೂನು ರೀತಿ ಕ್ರಮ ವಹಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ತಿಳಿಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಪೊಲೀಸ್ ಚೌಕಿ ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಾರ್ವಜನಿಕರು ವೃತ್ತದಲ್ಲಿ ಫ್ಲೆಕ್ಸ್ ಹಾವಳಿ ಬಗ್ಗೆ ದೂರಿದ್ದರು. ಈ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತರಿಗೆ ಸೂಕ್ತ ಮಾರ್ಗದರ್ಶನ ನೀಡಿರುವ ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿ ಭುವನೇಶ್ವರಿ ವೃತ್ತದಲ್ಲಿ ಯಾವುದೇ ಮಾದರಿಯ ಫ್ಲೆಕ್ಸ್ ಹಾಗೂ ಬಂಡಿಂಗ್ಸ್ ಅಳವಡಿಸಲು ಅನುಮತಿ ನೀಡಬಾರದು. ಕಾನೂನು ಮೀರಿ ಅಳವಡಿಸಿದರೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಜನರು ಇನ್ನು ಮುಂದೆ ಭುವನೇಶ್ವರಿ ವೃತ್ತದಲ್ಲಿ ಯಾವುದೇ ರೀತಿ ಫ್ಲೆಕ್ಸ್‌ಗಳನ್ನು ಅಳವಡಿಸಬಾರದು. ಇತರೇ ಸರ್ಕಲ್‌ನಲ್ಲಿ ಹಾಕಲು ನಗರಸಭೆಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡು ಅಧಿಕೃತವಾಗಿ ಶುಲ್ಕ ಕಟ್ಟಬೇಕು ಎಂದು ತಿಳಿಸಿದರು.
ಪ್ರಮುಖವಾಗಿ ಭುನವೇಶ್ವರಿ ವೃತ್ತದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಸಿಗ್ನಲ್‌ಗಳು ಕಾಣಿಸಿದಂತೆ ಉದ್ದದ ಬೋರ್ಡ್‌ಗಳನ್ನು ಹಾಕುವುದು, ರಸ್ತೆಯ ಬದಿಗಳಲ್ಲಿ ಫ್ಲೆಕ್ಸ್‌ಗಳನ್ನು ಹಾಕುವುದರಿಂದ ಎದುರುಗಡೆಯಿಂದ ಬರುವ ವಾಹನಗಳು ಕಾಣಿಸದೆ ಅಪಘಾತವಾಗುತ್ತಿತ್ತು. ಸರ್ಕಲ್‌ನಲ್ಲಿ ವಾಹನ ಮತ್ತು ಬೈಕ್‌ಗಳನ್ನು ನಿಲ್ಲಿಸಿ, ಫ್ಲೆಕ್ಸ್‌ಗಳನ್ನು ನೋಡುವುದು ನಿಂತು ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದರು. ಈ ಬಗ್ಗೆ ಟ್ರಾಫಿಕ್ ಸಿಗ್ನಲ್ ಉಲ್ಲಂಘನೆಯಾಗುತಿತ್ತು. ಪ್ರತಿ ನಿತ್ಯವು ಅನಗತ್ಯವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸುವುದು, ಹುಟ್ಟುಹಬ್ಬ, ಜಾತ್ರೆ ಹಾಗೂ ಜಿಲ್ಲೆಗೆ ಸಂಬಂಧಿಸದ ವಿಚಾರಗಳು ಹಾಗೂ ವ್ಯಕ್ತಿಗಳ ಫ್ಲೆಕ್ಸ್‌ಗಳು ಸಹ ರಾರಾಜಿಸುತ್ತಿದ್ದರು. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಇದೆಲ್ಲವನ್ನು ತಪ್ಪಿಸಲು ಫ್ಲೆಕ್ಸ್ ನಿಷೇಧಿಸಲಾಗಿದೆ ಎಂದು ಪೌರಾಯುಕ್ತ ಪರಶುರಾಮ್ ಛಲವಾದಿ ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.