ಕೊಡಗಿನ ಕಾವೇರಿ ಮನೆ ಚಂದನ್ ಗೆ ಯುಎನ್‌ ಬುಕ್‌ ಆಫ್‌ ರೆಕಾರ್ಡ್‌ ಪ್ರಶಸ್ತಿ

KannadaprabhaNewsNetwork |  
Published : Oct 20, 2025, 01:04 AM IST
ಪ್ರಶಸ್ತಿ ಪಡೆದುಕೊಂಡಿರುವ ಕಾವೇರಿ ಮನೆ ಚಂದನ್ . | Kannada Prabha

ಸಾರಾಂಶ

ಡೆಲ್ಲಿಯ ಯು ಎನ್‌ ಸಂಸ್ಥೆ ವಿಶೇಷ ಪ್ರತಿಭೆಯನ್ನು ಗುರುತಿಸಿ ನೀಡುವ ಯು ಎನ್‌ ಬುಕ್‌ ಆಫ್‌ ರೆಕಾರ್ಡ್ ಪ್ರಶಸ್ತಿಯನ್ನು ಕೊಡಗಿನ ಕಾವೇರಿ ಮನೆ ಚಂದನ್‌ ಅವರಿಗೆ ನೀಡಲಾಯಿತು

ಕನ್ನಡಪ್ರಭ ವಾರ್ತೆ ನಾಪೋಕ್ಲು

ಡೆಲ್ಲಿಯ ಯು ಎನ್ ಸಂಸ್ಥೆ ವಿಶೇಷ ಪ್ರತಿಭೆಯನ್ನು ಗುರುತಿಸಿ ನೀಡುವ ಯು ಎನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಯನ್ನು ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಮೈಸೂರಿನ ಫುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಕಾವೇರಿ ಮನೆ ಚಂದನ್ ಅವರಿಗೆ ನೀಡಿ ಗೌರವಿಸಲಾಯಿತು.

ಕಾರು, ಜೀಪು ಜೆಸಿಬಿ, ಹಿಟಾಚಿ ಸೇರಿದಂತೆ ವಿವಿಧ ವಾಹನಗಳನ್ನು ಲೀಲಾಜಾಲವಾಗಿ ಚಲಾಯಿಸುವ ಹನ್ನೊಂದರ ಹರೆಯದ ಕಾವೇರಿ ಮನೆ ಚಂದನ್ ಯು ಎನ್ ಸಂಸ್ಥೆ ಡೆಲ್ಲಿ ಪ್ರತಿಭೆಯನ್ನು ಪರಿಗಣಿಸಿ ಯು ಎನ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ, ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಕರ್ನಾಟಕ ಮಾಣಿಕ್ಯ ಶ್ರೇಷ್ಠ

ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

(ಇಲ್ಲಿನ) ನಾಪೋಕ್ಲು ಶ್ರೀರಾಮ ಟ್ರಸ್ಟ್ ವಿದ್ಯಾ ಸಂಸ್ಥೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಚಂದನ್ ಈ ದಾಖಲೆ ನಿರ್ಮಿಸಿದ್ದು ಈತನನ್ನು ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ ವತಿಯಿಂದ ಮೈಸೂರಿನ ಫುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 1 ಲಕ್ಷ ಮೊತ್ತ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಚಂದನ್ ಕೊಡಗಿನ ಮಡಿಕೇರಿ ತಾಲೂಕು ಅಯ್ಯಂಗೇರಿ ಗ್ರಾಮದ ನಿವಾಸಿ ಗುತ್ತಿಗೆದಾರ ಕಾವೇರಿ ಮನೆ ಭರತ್ ಮತ್ತು ಯೋಗಿತಾ ದಂಪತಿಗಳ ಪುತ್ರ.

ಕಾರ್ಯಕ್ರಮದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ ಸಿ ಚೊಂದಮ್ಮ ಪೂಣಚ್ಚ, ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ

ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಕಸ್ತೂರಿ ಚಂದ್ರು, ಮೈಸೂರ ನಗರ ಅಧ್ಯಕ್ಷರಾದ ಮೌಲ್ಯ ಜೈ ಕುಮಾರ್, ಹಾಸನ ಜಿಲ್ಲಾಧ್ಯಕ್ಷರಾದ ಪಾರ್ವತಿ, ಹುಬ್ಬಳ್ಳಿ

ಧಾರವಾಡ ಜಿಲ್ಲಾಧ್ಯಕ್ಷರಾದ ಡಾ, ಜಿ ಪ್ರೇಮ, ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷರಾದ ಡಾ. ನಯನ , ಸಂಸ್ಥಾಪಕ ಕಾರ್ಯದರ್ಶಿ ಡಾ ತೇಜಸ್ ಪೃಥ್ವಿರಾಜ್‌, ಕನ್ನಡ ಸಾಹಿತ್ಯ ಪರಿಷತ್‌ ಮೈಸೂರು ಜಿಲ್ಲಾಧ್ಯಕ್ಷರಾದ ಅಮೀನಾ ಬೇಗಮ್ , ನಟರಾಜು ಎಚ್.ಪಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ