- ತಾವು ಓದಿದ ದಾವಣಗೆರೆ ಯುಬಿಡಿಟಿ ಕಾಲೇಜು ಬರೀ ಪದವಿ ನೀಡುವ ಸಂಸ್ಥೆಯಾಗಿರಲಿಲ್ಲ ಎಂದು ಅಭಿಮತ - - -
ದಾವಣಗೆರೆಯ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಮಗೆ ಕೇವಲ ಎಂಜಿನಿಯರಿಂಗ್ ಪದವಿ ನೀಡುವ ಸಂಸ್ಥೆಯಾಗಿ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಗುರುಕುಲವೂ ಆಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಯುಬಿಡಿಟಿ ಕಾಲೇಜಿನ ಹಳೆಯ ವಿದ್ಯಾರ್ಥಿ ಬಿ.ಎಲ್.ಸಂತೋಷ್ ತಿಳಿಸಿದರು.
ನಗರದಲ್ಲಿ ಶನಿವಾರ ಯುಬಿಡಿಟಿ ಕಾಲೇಜಿನ ಅಮೃತ ಮಹೋತ್ಸವದ ಸಮಾರೋಪ ಹಾಗೂ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಷ್ಟಿತ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಖ್ಯಾತಿಯ ಯುಬಿಡಿಟಿ ಕಾಲೇಜು ನಮಗೆ ಪದವಿ ನೀಡಿದ್ದಲ್ಲದೇ, ವ್ಯಕ್ತಿತ್ವ ವಿಕಸನದ ಗುರುಕುಲವೂ ಆಗಿತ್ತು ಎಂದರು.ನಾವೆಲ್ಲಾ ಎಂಜಿನಿಯರಿಂಗ್ ಓದುವಾಗ ಕಂಪ್ಯೂಟರ್ ಸೈನ್ಸ್ ಆಗಷ್ಟೇ ಆರಂಭವಾಗಿದ್ದ ವಿಷಯವಾಗಿತ್ತು. ಕಾಲೇಜು ಪ್ರಾಧ್ಯಾಪಕರು ನಮಗೆ ಕೇವಲ ಪಠ್ಯದ ಪಾಠಗಳನ್ನು ಬೋಧಿಸುವುದಷ್ಟೇ ಅಲ್ಲ, ಜೀವನದ ಮೌಲ್ಯಗಳನ್ನು ತಿಳಿಸಿ ಕೊಡುತ್ತಿದ್ದರು. ನುರಿತ ಪ್ರಾಧ್ಯಾಪಕರು ನಮ್ಮ ಈ ಕಾಲೇಜಿನ ಆಸ್ತಿಯಾಗಿದ್ದರು. ಇದರಿಂದ ಗುಣಮಟ್ಟದ ಶಿಕ್ಷಣ ನಮಗೆಲ್ಲರಿಗೂ ಸಿಗುತ್ತಿತ್ತು. ಈ ಕಾಲೇಜಿನ ನನ್ನ ದಿನಗಳನ್ನು ನಾನೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಯುಬಿಡಿಟಿ ಹಳೇ ವಿದ್ಯಾರ್ಥಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಮಾಜಿ ಸಂಸದ ಜನಾರ್ಧನ ಸ್ವಾಮಿ, ಎಐಸಿಟಿಇ ಮಾಜಿ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್, ಯುಬಿಡಿಟಿ ಕಾಲೇಜು ಪ್ರಾಚಾರ್ಯ ಡಾ.ಡಿ.ಪಿ.ನಾಗರಾಜಪ್ಪ ಇತರರು ಇದ್ದರು. ಇದೇ ವೇಳೆ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಂದ ಅತಿಥಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ, ಶಂಕು ಸ್ಥಾಪನೆ ನೇರವೇರಿತು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಮತ್ತು ಹಳೇ ವಿದ್ಯಾರ್ಥಿಗಳಿಂದ ನಡೆಯಿತು. ಎಲ್ಲರನ್ನೂ ರಂಜಿಸಲು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುಬಿಡಿಟಿ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
- - -
- ಡಾ. ಎಸ್.ವಿದ್ಯಾಶಂಕರ್, ಕುಲಪತಿ, ವಿಟಿಯು.
-30ಕೆಡಿವಿಜಿ5: ದಾವಣಗೆರೆ ಯುಬಿಡಿಟಿ ಕಾಲೇಜಿನ ಸಮಾರೋಪದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಮಾಜಿ ಸಂಸದ ಜನಾರ್ದನ ಸ್ವಾಮಿ, ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ ಇತರರರು ಇದ್ದರು.