ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ

KannadaprabhaNewsNetwork |  
Published : Oct 17, 2023, 12:45 AM IST
ನಾಡೋಜ ಜಿ.ಶಂಕರ್ ನೇತೃತ್ವದಲ್ಲಿ ಚಂಡಿಕಾಯಾಗ ನೆರವೇರಿತು | Kannada Prabha

ಸಾರಾಂಶ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.

ಕನ್ನಡಪ್ರಭ ವಾರ್ತೆ ಉಚ್ಚಿಲ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು. ಬೆಳಗ್ಗೆ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಸಂಜೆ ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಗಮ ಶಾಸ್ತ್ರಜ್ಞ ವಿದ್ವಾನ್ ಪಂಜ ಭಾಸ್ಕರ ಭಟ್ ಅವರಿಂದ ವಿಶೇಷ ಉಪನ್ಯಾಸ ನಡೆಯಿತು. ಸಂಜೆ ಮಹಿಳೆಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಅಲೆಹೊಳೆ ಪ್ರತಿಷ್ಠಾನ ನಂದಗೋಕುಲ ತಂಡದಿಂದ ಶ್ವೇತಾ ಅರೆಹೊಳೆ ನಿರ್ದೇಶನದಲ್ಲಿ ನೃತ್ಯ ವೈಭವ ನಡೆಯಿತು. ಸಹಸ್ರ ಸಂಖ್ಯೆಯಲ್ಲಿ ಭಕ್ತರು ಈ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಇಂದು ಮಾತೆ ಶ್ರೀ ಚಂದ್ರಘಟಾ ದೇವಿ ಆರಾಧನೆ ನಡೆಯಲಿದೆ. ಸಂಜೆ ಧಾರ್ಮಿಕ ಸಭೆಯಲ್ಲಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ಅವರಿಂಗ ಪ್ರಮುಖ ಭಾಷಣ, ಮಂಗಳೂರಿನ ಶ್ರೀಕಾಂತ್ ಕಾಮತ್ ಬಳಗದವರಿಂದ ಗರ್ಬಾ ಮತ್ತು ದಾಂಡಿಯಾ ನೈಟ್ ಹಾಗೂ ರಾಘವೇಂದ್ರ ಜನ್ಸಾಲೆ ನೇತೃತ್ವದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀನಿವಾಸ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ