ಉಚ್ಚಿಲ: ಇಂದು ಶ್ರೀಮಾಧವ ಮಂಗಲರ ಪುತ್ಥಳಿ ಅನಾವರಣ

KannadaprabhaNewsNetwork |  
Published : Sep 25, 2026, 02:30 AM IST
24ಗುರು | Kannada Prabha

ಸಾರಾಂಶ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭವು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜರಗಲಿದೆ.

ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀಕ್ಷೇತ್ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭವು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜರಗಲಿದೆ.ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರುಪರಂಪರೆಯ ಕೊನೆಯ ಗುರುಗಳಾದ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಶ್ರೀಕ್ಷೇತ್ರದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿಬಂದ ಹಿನ್ನೆಲೆಯಲ್ಲಿ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಈ ವಿಗ್ರಹವನ್ನು ಸ್ಥಾಪಿಸಲಾಗಿದೆ, ಈ ಭವ್ಯ ಕಂಚಿನ ವಿಗ್ರಹವು 31 ಅಡಿ ಎತ್ತರ ಹಾಗೂ ಸುಮಾರು 14,000 ಕೆ.ಜಿ. ತೂಕ ಹೊಂದಿದೆಸಮುದಾಯದ ಏಕತೆ, ಗುರುಭಕ್ತಿ ಹಾಗೂ ಗುರುಪರಂಪರೆಯ ಭವ್ಯತೆಯನ್ನು ಮುಂದಿನ ಪೀಳಿಗೆಗೆ ಸಾರುವ ಉದ್ದೇಶದಿಂದ ಈ ವಿಗ್ರಹ ಸ್ಥಾಪಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ಈ ನೂತನ ಪುತ್ಥಳಿಯನ್ನು ಸೆ. 25ರಂದು ಅನಾವರಣಗೊಳಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜ್ವಾನ್ ಅರ್ಷದ್ ಅವರು ಗುರಿಕಾರರಿಗೆ ಗೌರವಧನ ವಿತರಿಸಲಿದ್ದು, ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರು, ಶಾಸಕರು ಮತ್ತು ಮಹಾಜನ ಸಂಘದ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನವದೆಹಲಿ: ಪೇಜಾವರ ಶ್ರೀ-ಹೊಸಬಾಳೆ ಭೇಟಿ
ಇಂಜಿನಿಯರ್‌ಗಳು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು: ಡಾ.ಹೊಳ್ಳ