ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಲೀಲಾವತಿ ಬಡಾವಣೆಯ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪಗಳು ಮತ್ತು ಟೀಕೆಗಳು ಸಹಜ. ಆದರೆ, ಶಾಸಕ ಉದಯ್ ನನ್ನನ್ನು ವ್ಯಕ್ತಿಗತವಾಗಿ ಟೀಕೆ ಮಾಡುತ್ತಿದ್ದಾರೆ. ಈ ಎಲ್ಲವನ್ನೂ ಕ್ಷೇತ್ರದ ಜನತೆ ಗಮನಿಸುತ್ತಿದ್ದಾರೆ ಎಂದರು. ಅಭಿವೃದ್ಧಿ ಎನ್ನುವುದು ಒಬ್ಬರಿಂದ ಮಾಡಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ನಾನು ಮಂಡ್ಯ ಜಿಲ್ಲೆಗೆ ಕಾರ್ಖಾನೆಗಳನ್ನು ತರಲು ಸಿದ್ಧನಿದ್ದೇನೆ. ಇದಕ್ಕೆ ಭೂಮಿ ಅಗತ್ಯವಿದೆ, ಇಂಥ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು ಕಳೆದ ಎರಡೂವರೆ ತಿಂಗಳಿಂದ ಧರಣಿ ನಡೆಸುತ್ತಿದ್ದಾರೆ. ನಾನು ಸಹ ಗ್ರಾಮಕ್ಕೆ ಭೇಟಿ ನೀಡಿ ಚಳವಳಿ ನಿರತ ಮುಖಂಡರ ಅಹವಾಲು ಆಲಿಸಿ ಬೆಂಬಲ ಸೂಚಿಸಿದ್ದೇನೆ ಎಂದರು.ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಆ ಭಾಗದ ಜನರ ತೀವ್ರ ವಿರೋಧವಿದೆ. ಈ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದೇನೆ. ಅವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉತ್ತರಿಸಿದರು.