ಉದಯಗಿರಿ ಪ್ರಕರಣ: ಗೃಹ ಸಚಿವರ ವಿರುದ್ಧ ಸಂಸದ ಕೋಟ ಆಕ್ರೋಶ

KannadaprabhaNewsNetwork |  
Published : Feb 12, 2025, 12:32 AM IST
32 | Kannada Prabha

ಸಾರಾಂಶ

ಉದಯಗಿರಿಯಲ್ಲಿ ನಡೆದ ಪೊಲೀಸ್ ಠಾಣೆಯ ಮೇಲಿನ ದಾಳಿ ಹಾಗೂ ಹದಿನಾರುಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ಮೇಲಿನ ಕಲ್ಲೇಟು ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಸಂಸದ ಕೋಟ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯದಲ್ಲಿ ಕಾನೂನನ್ನು ಕಾಯಬೇಕಾದವರೇ ಕೊಲ್ಲುತ್ತಿದ್ದಾರೆ. ಯಾರೇ ಕಿಡಿಗೇಡಿಗಳು ತಪ್ಪು ಮಾಡಿದ್ದರೂ ಅವರ ಜಾತಿಯ ಆಧಾರದ ಮೇಲೆ ತಪ್ಪು ಯಾರದೆಂದು ನಿರ್ಧರಿಸುವ ಮಟ್ಟಕ್ಕೆ ರಾಜ್ಯ ಸರ್ಕಾರ ಬಂದಿದೆ. ಗೃಹ ಸಚಿವರ ಹೇಳಿಕೆ ನಿಜಕ್ಕೂ ಶೋಚನೀಯ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದಯಗಿರಿಯಲ್ಲಿ ನಡೆದ ಪೊಲೀಸ್ ಠಾಣೆಯ ಮೇಲಿನ ದಾಳಿ ಹಾಗೂ ಹದಿನಾರುಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ಮೇಲಿನ ಕಲ್ಲೇಟು ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಸಂಸದ ಕೋಟ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಿ ಡಿಸಿಪಿ ತಲೆ ಒಡೆದು 16 ಪೊಲೀಸರಿಗೆ ಗಾಯ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಜರಗಿಸುವುದು ಬಿಟ್ಟು ಪೆಟ್ಟು ತಿಂದ ಪೊಲೀಸರದ್ದೇ ತಪ್ಪು ಎಂದ ಗೃಹ ಮಂತ್ರಿಗಳ ನಿಲುವು ನಿಜಕ್ಕೂ ಶೋಚನೀಯ. ಕಾನೂನು ಕಾಯಬೇಕಾದವರೇ ಕೊಂದಂತಾಯಿತು. ಹಿರಿಯ ಸಚಿವ ಪರಮೇಶ್ವರ್ ರವರಿಂದ ಇಂತಹ ಪ್ರತಿಕ್ರಿಯೆ ನಿರೀಕ್ಷಿಸಿರಲಿಲ್ಲ ಎಂದು ಸಂಸದ ಕೋಟ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

..............ಮೂಲ ಗೇಣಿ ಒಕ್ಕಲು ಸಮಸ್ಯೆ ಜೀವಂತ ಇರುವುದು ದುರಂತ: ಪ್ರೊ.ಕೆ.ಎಸ್‌.ಶೆಟ್ಟಿ

ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳೂವರೆ ದಶಕಗಳ ನಂತರವೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲಗೇಣಿ ಒಕ್ಕಲುಗಳ ಸಮಸ್ಯೆ ಜೀವಂತವಾಗಿರುವುದು ಅತ್ಯಂತ ಕಳವಳಕಾರಿ ವಿಷಯ ಎಂದು ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ವಿಷಾದಿಸಿದರು.

ಭಾನುವಾರ ಉಡುಪಿ ಬಳಕೆದಾರರ ವೇದಿಕೆಯ ಸಭಾಂಗಣದಲ್ಲಿ ಜರುಗಿದ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಮಂಗಳೂರು ಮತ್ತು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ 7 ತಾಲೂಕುಗಳಲ್ಲಿರುವ ಮೂಲಗೇಣಿದಾರರಿಗೆ, ಈ ಸಮಸ್ಯೆಯ ಬಗ್ಗೆ ಸರಕಾರ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಡೆದ ಬೆಳವಣಿಗೆ ಕುರಿತು ವಿಶೇಷ ಮಾಹಿತಿ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ಅವರು ಉಪನ್ಯಾಸ ನೀಡಿದರು.ಈ ಶೇೂಷಣೆ ನಿವಾರಿಸಲು ರಾಜ್ಯ ಸರ್ಕಾರ 2011ರಲ್ಲಿ ಮೂಲಗೇಣಿದಾರರಿಗೆ ಭೂಮಿಯ ಸಂಪೂರ್ಣ ಒಡೆತನ ಖಾತ್ರಿ ಪಡಿಸುವ ಕಾಯಿದೆ ನಿರ್ಣಯಿಸಿ ರಾಷ್ಟ್ರಪತಿಗಳ ಅಂಕಿತ ಪಡೆದು ಅನುಷ್ಠಾನಗೊಳಿಸಲು ಸಿದ್ದತೆ ನಡೆಸಿದಾಗ, ಕೆಲವೊಂದು ಹಿತಾಸಕ್ತಿ ಮೂಲಿದಾರರು ಹೈಕೋರ್ಟ್ ಮೆಟ್ಟಿಲು ಹತ್ತಿದರು. ಪರಿಣಾಮವಾಗಿ ರಾಜ್ಯ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠ ಮೂಲಗೇಣಿದಾರರ ಬೇಡಿಕೆ ನ್ಯಾಯಯುತವಾಗಿದೆ ಎಂದು ತೀರ್ಪು ನೀಡಿತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕಾರಣ ಇದೀಗ ತೀರ್ಪು ಪ್ರಕಟಗೊಳ್ಳುವ ಹಂತದಲ್ಲಿದೆ. ಈ ನ್ಯಾಯ ಪಡೆಯುವಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಮೂಲಗೇಣಿದಾರರು ಒಟ್ಟಾಗಿ ಧ್ವನಿ ಎತ್ತಿ ಹೋರಾಟ ಮಾ ಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಮಂಗಳೂರು ಮೂಲಗೇಣಿ ಒಕ್ಕಲು ವೇದಿಕೆ ಅಧ್ಯಕ್ಷ ಎಂ.ಕೆ.ಯಶೇೂಧರ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಕೇೂಶಾಧಿಕಾರಿ ಶಂಕರ್ ಪ್ರಭು, ಹಿರಿಯ ಪದಾಧಿಕಾರಿಗಳಾದ ಕ್ಯಾಪ್ಟನ್ ಹ್ಯುಗಸ್ ಮಂಗಳೂರುಇದ್ದರು. ಉಡುಪಿ ಜಿಲ್ಲಾ ಏಳು ತಾಲೂಕಿನ ಮೂಲಗೇಣಿದಾರರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಸಂಘಟನಾ ಪ್ರತಿನಿಧಿ ಎಸ್.ಎಸ್.ಶೇಟ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಯಲಾಯ್ತು ಕಾಮಚಂದ್ರರಾವ್‌ ಐಪಿಎಸ್‌ ವಿಡಿಯೋಗಳ ಅಸಲಿ ಮುಖ
ಕೆಎಂಎಫ್‌ ಸ್ವೀಟ್‌ ತಯಾರಿಗೂ ಸಿಗ್ತಿಲ್ಲ ಗ್ಯಾಸ್‌!