ಕೆಚ್ಚಲು ಕೊಯ್ದ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jan 16, 2025, 12:49 AM IST
೧೫ಕೆಎಂಎನ್‌ಡಿ-೨ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿ ಬಿಜೆಪಿ ಮುಖಂಡರು-ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಬಹುಮುಖ್ಯವಾದ ವಿಚಾರ. ಗೋವು, ಮನುಷ್ಯ ಹಾಗೂ ಪ್ರಕೃತಿಗೆ ಅವಿನಾಭಾವ ಸಂಬಂಧ ಇದ್ದು ಭಾರತೀಯ ಪರಂಪರೆಯಲ್ಲಿ ಗೋಮಾತೆಗೆ ತನದೇ ಆದ ವಿಶಿಷ್ಟ ಸ್ಥಾನವಿದೆ. ದೇಶದಲ್ಲಿ ಕೃಷಿ ಉಳಿದಿದ್ದರೆ ಅದು ಗೋ ಮಾತೆಯ ಕಾಣಿಕೆಯಾಗಿದೆ. ಆದರೆ, ರಾಜ್ಯದ ಕೋಟ್ಯಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರ್ಪಡಿಸುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ಮತ್ತು ಗೋವು ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್‌ ಮತ್ತು ಅಲ್ಪಸಂಖ್ಯಾತ ಖಾತೆ ಸಚಿವ ಜಮೀರ್ ಅಹಮದ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಭಾವಚಿತ್ರದ ಮುಖವಾಡಕ್ಕೆ ಸಗಣಿ ಬಳಿಯುವಾಗ ಪೊಲೀಸರು ತಡೆಯಲು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಬಹುಮುಖ್ಯವಾದ ವಿಚಾರ. ಗೋವು, ಮನುಷ್ಯ ಹಾಗೂ ಪ್ರಕೃತಿಗೆ ಅವಿನಾಭಾವ ಸಂಬಂಧ ಇದ್ದು ಭಾರತೀಯ ಪರಂಪರೆಯಲ್ಲಿ ಗೋಮಾತೆಗೆ ತನದೇ ಆದ ವಿಶಿಷ್ಟ ಸ್ಥಾನವಿದೆ. ದೇಶದಲ್ಲಿ ಕೃಷಿ ಉಳಿದಿದ್ದರೆ ಅದು ಗೋ ಮಾತೆಯ ಕಾಣಿಕೆಯಾಗಿದೆ. ಆದರೆ, ರಾಜ್ಯದ ಕೋಟ್ಯಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರ್ಪಡಿಸುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಹಸುವಿನ ಕೆಚ್ಚಲು ಕತ್ತರಿಸಿರುವ ಪ್ರಕರಣದಲ್ಲಿ ದೊಡ್ಡ ಗ್ಯಾಂಗ್‌ನ ಕೈವಾಡವಿದೆ. ಆದರೆ, ಪೊಲೀಸ್ ಇಲಾಖೆ ಕೇವಲ ಒಬ್ಬ ವ್ಯಕ್ತಿಯನ್ನು ಮಾತ್ರ ಬಂಧಿಸಿ ಕಸ್ಟಡಿಗೂ ಪಡೆಯದೆ ಏಕಾಏಕಿ ಜೈಲಿಗಟ್ಟಿರುವುದು ಹಲವು ಅನುಮಾನ ಮೂಡಿಸುತ್ತಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ದುರುಳರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಮೂರು ಹಸುಗಳ ಕೆಚ್ಚಲನ್ನು ಒಬ್ಬನೇ ವ್ಯಕ್ತಿ ಕೊಯ್ಯಲು ಸಾಧ್ಯವಿಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿದ್ದಾರೆನ್ನಲಾದ ಎಲ್ಲರನ್ನೂ ಬಂಧಿಸಿ ಕಾರಾಗೃಹಕ್ಕೆ ಅಟ್ಟಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ೧೫ ಜಿಲ್ಲೆಗಳಲ್ಲಿ ಗೋಶಾಲೆ ಪ್ರಾರಂಭಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಹು ಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ಗೋಶಾಲೆಗಳಿಗೆ ಅನುದಾನ ಕಡಿತಗೊಳಿಸಿ ಅದರ ಮೂಲ ಉದ್ದೇಶಗಳಿಗೆ ತೊಂದರೆ ಕೊಡುವ ಮೂಲಕ ಗೋ ಶಾಲೆಗಳನ್ನು ಮುಚ್ಚಲು ಹೊರಟಿರುವುದು ರಾಜ್ಯದ ಜನರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ೧.೧೯ ಕೋಟಿ ಜಾನುವಾರುಗಳಿದ್ದು, ಇವುಗಳ ಸಂರಕ್ಷಣೆ ಮಾಡಲು ಮತ್ತು ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಸಾಕಷ್ಟು ಪುರಸ್ಕೃತ ಯೋಜನೆ ರೂಪಿಸಿದೆ. ಇಂತಹ ಯೋಜನೆ ಅನುಷ್ಠಾನ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಆದರೆ. ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ ವಾಗಿದೆ. ಇದು ರಾಜ್ಯ ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ತೋರಿಸುತ್ತದೆ. ಗೋ ಶಾಲೆಗಳನ್ನು ಮುಚ್ಚುವ ಮೂಲಕ ಗೋ ಕಳ್ಳ ನಾಗಣೆ ಉತ್ತೇಜನೆ ನೀಡುತ್ತಿದೆ ಎಂದು ದೂರಿದರು.

ರಾಜ್ಯದ ಎಲ್ಲೆಡೆ ಗೋ ಶಾಲೆಗಳನ್ನು ಪುನರಾರಂಭಿಸಬೇಕು, ಗೋ ಶಾಲೆಗಳಿಗೆ ವಿಶೇಷ ಅನುದಾನ ನೀಡಬೇಕು, ಕೇಂದ್ರ ಪುರಸ್ಕೃತ ಗೋ ಆಧಾರಿತ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಬಹು ಸಂಖ್ಯಾತರ ಭಾವನೆಗಳಿಗೆ ಧಕ್ಕೆಯಾಗದ ರೀತಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎಸ್.ಎನ್.ಇಂದ್ರೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಕಾರ್ಯದರ್ಶಿ ಆನಂದ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಆರ್. ಅಶೋಕ್‌ಕುಮಾರ್, ಮುಖಂಡರಾದ ಎಚ್.ಆರ್.ಅರವಿಂದ್, ನಾಗಮಂಗಲ ನರಸಿಂಹಮೂರ್ತಿಗೌಡ, ರಮೇಶ್ ವಿಶ್ವಕರ್ಮ, ನಿಂಗರಾಜು, ಶಿವಕುಮಾರ್ ಆರಾಧ್ಯ ಸಿ.ಟಿ ಮಂಜುನಾಥ್, ಗ್ರಾಮಾಂತರ ಅಧ್ಯಕ್ಷ ಭೀಮೇಶ್, ಜವರೇಗೌಡ , ಮದ್ದೂರ್ ಸತೀಶ್, ಜೋಗಿಗೌಡ, ಪಿ.ಹಳ್ಳಿ ರಮೇಶ್ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ವಕೀಲರಿಗೆ ಮಾಹಿತಿ ನೀಡದಿದ್ರೆ ಕ್ರಮ : ಹೈ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌