ಕನ್ನಡಪ್ರಭ ವಾರ್ತೆ ಮಣಿಪಾಲಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ತೆರೆಯಲಾದ ಜಿಲ್ಲಾಮಟ್ಟದ ಪ್ರಮಾಣೀಕರಣ ಮತ್ತು ಮಾಧ್ಯಮ ಕಣ್ಗಾವಲು ಸಮಿತಿ (ಎಂ.ಸಿ.ಎಂ.ಸಿ.) ಕಚೇರಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಅಲೋಕ್ ಕುಮಾರ್ ಅವರು ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
* ಚುನಾವಣೆ ವೆಚ್ಚ ವೀಕ್ಷಕರ ನೇಮಕ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ಚುನಾವಣಾ ವೆಚ್ಚ ವೀಕ್ಷಕರ ಕಚೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0820-2001204 ಅಥವಾ ಮೊಬೈಲ್ ಸಂಖ್ಯೆ 9482258424 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.