ಮಲ್ಪೆ ಬೀಚ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಸಿಂಫನಿ ಸಂಗೀತ ಬಳಗ ಹಾಗೂ ಭ್ರಾಮರಿ ಜನಪದ ಕಲಾ ತಂಡ ಉಡುಪಿ ಇವರ ಸಹಯೋಗದಲ್ಲಿ ನಡೆದ ‘ಕಲಾ ನಡಿಗೆ, ನಿಮ್ಮ ಬಳಿಗೆ’ ಎಂಬ ಸುಗಮ ಸಂಗೀತ ಹಾಗೂ ಜನಪದ ನೃತ್ಯ ಕಾರ್ಯಕ್ರಮ
ಮಲ್ಪೆ: ಮನುಷ್ಯನ ಆರೋಗ್ಯದ ಅಭಿವೃದ್ಧಿಗೆ ದೈಹಿಕ, ಮಾನಸಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತಿ ಅವಶ್ಯ. ಈ ಮೂರು ಚಟುವಟಿಕೆಗಳಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವಯಾಗಲು ಸಾಧ್ಯವಾಗುತ್ತದೆ. ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಶಕ್ತಿಯನ್ನು ಸಾಂಸ್ಕೃತಿಕ ಚಟುವಟಿಕೆಗಳಿಗಿವೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹೇಳಿದರು.
ಅವರು ಮಲ್ಪೆ ಬೀಚ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಸಿಂಫನಿ ಸಂಗೀತ ಬಳಗ ಹಾಗೂ ಭ್ರಾಮರಿ ಜನಪದ ಕಲಾ ತಂಡ ಉಡುಪಿ ಇವರ ಸಹಯೋಗದಲ್ಲಿ ನಡೆದ ‘ಕಲಾ ನಡಿಗೆ, ನಿಮ್ಮ ಬಳಿಗೆ’ ಎಂಬ ಸುಗಮ ಸಂಗೀತ ಹಾಗೂ ಜನಪದ ನೃತ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಪ್ರದೇಶದಲ್ಲಿ ಜನಪದ ಸಂಪತ್ತು ಆಗಾಧವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜಾನಪದ ಪ್ರಕಾರಗಳು ಅನೇಕ ಕಾರಣದಿಂದಾಗಿ ದೂರವಾಗುತ್ತಿದ್ದು, ಅವುಗಳೆಡೆಗೆ ಜನರನ್ನು ಸೆಳೆಯಲು ‘ಕಲಾ ನಡಿಗೆ ನಿಮ್ಮ ಬಳಿಗೆ’ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ನಮ್ಮ ಕಲಾ ಸಂಪತ್ತನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಸಿಂಫನಿ ಸಂಗೀತ ಬಳಗದಿಂದ ಸುಗಮ ಸಂಗೀತ ಹಾಗೂ ಜನಪದ ಗೀತ ಗಾಯನ, ಭ್ರಾಮರಿ ಜನಪದ ಕಲಾ ತಂಡದ ವತಿಯಿಂದ ಕಂಗೀಲು ನೃತ್ಯ ಪ್ರದರ್ಶನಗೊಂಡಿತು.
ಮಲ್ಪೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ನಗರಸಭೆ ನಾಮನಿರ್ದೇಶಿತ ಸದಸ್ಯ ಯಾದವ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಜನಪದ ಕಲಾವಿದ ಶಂಕರ್ ದಾಸ್ ಚಂಡ್ಕಳ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.