ಜ.ಗವಾಯಿ ಮೇಲೆ ಚಪ್ಪಲಿ ಎಸೆತ: ಉಡುಪಿ ವಕೀಲರ ಸಂಘ ಖಂಡನೆ

KannadaprabhaNewsNetwork |  
Published : Oct 10, 2025, 01:02 AM IST
32 | Kannada Prabha

ಸಾರಾಂಶ

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದು ನ್ಯಾಯಾಂಗದ ಘನತೆಗೆ ಧಕ್ಕೆ ಎಸಗಿದ ಘಟನೆಯನ್ನು ಸರ್ವಾನುಮತದಿಂದ ಉಡುಪಿ ವಕೀಲರ ಸಂಘ ಖಂಡಿಸಿದೆ.

ಉಡುಪಿ: ವಕೀಲನೊಬ್ಬನು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದು ನ್ಯಾಯಾಂಗದ ಘನತೆಗೆ ಧಕ್ಕೆ ಎಸಗಿದ ಘಟನೆಯನ್ನು ಸರ್ವಾನುಮತದಿಂದ ಉಡುಪಿ ವಕೀಲರ ಸಂಘ ಖಂಡಿಸಿದೆ. ಈ ದುಷ್ಕೃತ್ಯವನ್ನು ಎಸಗಿದ ಆರೋಪಿಯನ್ನು ಉಗ್ರ ಶಿಕ್ಷೆಗೆ ಒಳಪಡಿಸಿ ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಬುಧವಾರ ಉಡುಪಿ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ಆಗ್ರಹಿಸಲಾಯಿತು.ಈ ಘಟನೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಡೆದ ಧಾಳಿಯಾಗಿದೆ. ಸಂವಿಧಾನ ಓದಿದ, ಪ್ರಜಾಸತ್ತೆಯನ್ನು ಎತ್ತಿ ಹಿಡಿಯಬೇಕಾದ ಹಿರಿಯ ವಕೀಲರೊಬ್ಬರು ನ್ಯಾಯಪೀಠದ ಕಡೆಗೆ ಚಪ್ಪಲಿ ಎಸೆಯುತ್ತಾರೆ ಮಾತ್ರವಲ್ಲ ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದಾದರೆ ಆತನದು ಎಂತಹ ಕ್ರಿಮಿನಲ್ ಮನಸ್ಥಿತಿ ಇರಬೇಕು.? ಅರಿವಿದ್ದೂ ಎಸಗಿದ ಈ ಕೃತ್ಯಕ್ಕೆ ಕಠಿಣ ‌ಶಿಕ್ಷೆ ಆಗಲೇ ಬೇಕು. ನ್ಯಾಯಪೀಠದ ಮೇಲೆ ‌ಎಸಗಿರುವ ಈ ಕೃತ್ಯವನ್ನು ಸಂವಿಧಾನದ ಮೇಲೆ ಗೌರವವಿರುವ ಪ್ರತಿಯೊಬ್ಬ ನಾಗರಿಕನೂ ಖಂಡಿಸಬೇಕಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಯಿತು.ಸಭೆಯಲ್ಲಿ ಭಾಗವಹಿಸಿದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಎ. ಆರ್., ಖಜಾಂಚಿ ಗಂಗಾಧರ ಎಚ್.ಎಂ., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಮೂಡುಬೆಳ್ಳೆ ಸಹಿತ ಕಾರ್ಯಕಾರಿ ಸಮಿತಿಯ ಸಕಲ ಸದಸ್ಯರು ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಘಟನೆಯ ಬಗ್ಗೆ ಉನ್ನತ ಮಟ್ಟದ ನಡೆಸಬೇಕೆಂದು ಮತ್ತು ಇಂತಹ ದುರ್ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ