ಮಾರ್ಚ್ 1,2ರಂದು ಉಡುಪಿ ವಕೀಲರ ಸಂಘ ಕ್ರೀಡಾಕೂಟ: ಟ್ರೋಫಿ ಅನಾವರಣ

KannadaprabhaNewsNetwork |  
Published : Feb 25, 2025, 12:51 AM IST
32 | Kannada Prabha

ಸಾರಾಂಶ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾ. 1 ಮತ್ತು 2 ರಂದು ಆಯೋಜಿಸಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಸೋಮವಾರ ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್. ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.

ಪಂದ್ಯಾಕೂಟದ ಉದ್ಘಾಟನೆ :

ಪಂದ್ಯಾಕೂಟವನ್ನು ಮಾ.1ರ ಸಂಜೆ 4 ಗಂಟೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಕಾರಿ ಅಧ್ಯಕ್ಷ ನ್ಯಾ. ಕಾಮೇಶ್ವರ್ ರಾವ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಹೈಕೋರ್ಟಿನ ಇನ್ನೋರ್ವ ನ್ಯಾಯಮೂರ್ತಿ ರಾಜೇಶ್ ರೈ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಹಾಗೂ ಬೆಂಗಳೂರಿನ ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು ಎ೦ದು ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಾರೋಪ:

ಮಾ.2ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದು, ಶಾಸಕ ಯಶ್‍ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಪಿ.ಪಿ. ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ರಘುಪತಿ ಭಟ್ ಭಾಗವಹಿಸಲಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಗೊಳಿಸಲಾಗಿದೆ. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು.

ವೇದಿಕೆಯಲ್ಲಿ ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ ಎ.ಆರ್., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಖಜಾಂಚಿ ಗಂಗಾಧರ ಎಚ್.ಎಮ್., ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರು, ವಿವಿಧ ಉಪ-ಸಮಿತಿಗಳ ಸಂಚಾಲಕರಾದ ಎಂ. ಶಾಂತಾರಾಮ್ ಶೆಟ್ಟಿ, ಮಟ್ಟಾರ್ ರತ್ನಾಕರ್ ಹೆಗ್ಡೆ, ಶ್ರೀ ದಿವಾಕರ್ ಎಮ್ ಶೆಟ್ಟಿ,ಕೆ. ಆರ್ ರಾಮಚಂದ್ರ ಅಡಿಗ, ಬಿ. ನಾಗರಾಜ್, ಪ್ರವೀಣ್ ಎಮ್. ಪೂಜಾರಿ,ಆರೂರ್ ಸುಕೇಶ್ ಶೆಟ್ಟಿ, ಅಸಾದುಲ್ಲಾ ಕಟಪಾಡಿ, ಗಣೇಶ್ ಕುಮಾರ್ ಮಟ್ಟು, ಪಂದ್ಯಾಟದ ಉಸ್ತುವಾರಿಗಳಾದ ಸಚಿನ್ ಕುಮಾರ್ ಶೆಟ್ಟಿ,ಗಂಗಾಧರ ಶೇರಿಗಾರ್, ಯೋಗೀಶ್ ಕುಮಾರ್ ಸಾಲಿಗ್ರಾಮ ಮತ್ತು ಶ್ರೀಮತಿ ಸ್ಯಾಂಡ್ರಾ ಆ್ಯನ್ಸಿಲ್ಲಾ ಡಿಸೋಜಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ