ರಾಜ್ಯಪಾಲರಿಗೆ ಉಡುಪಿ ಬಿಜೆಪಿಯಿಂದ ಗೌರವಾರ್ಪಣೆ

KannadaprabhaNewsNetwork |  
Published : Oct 12, 2023, 12:00 AM IST
ರಾಜ್ಯಪಾಲ ಗೆಹ್ಲೋಟ್ ರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು | Kannada Prabha

ಸಾರಾಂಶ

ಉಡುಪಿಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಪರವಾಗಿ ರಾಜ್ಯಪಾಲರನ್ನು ಗೌರವಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆಯಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಪರವಾಗಿ ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಸುವರ್ಣ, ಗುಮೆ೯ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಕೆ.ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು. ಫೋಟೋ ಃ ರಾಜ್ಯಪಾಲ ಬಿಜೆಪಿ ರಾಜ್ಯಪಾಲ ಗೆಹ್ಲೋಟ್ ರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’