ಉಡುಪಿ: ನಾಳೆ ಬಿಜೆಪಿ ಸ್ಥಾಪನಾ ದಿನಾಚರಣೆ, 10ರಂದು ಜನಾಕ್ರೋಶ ಯಾತ್ರೆ

KannadaprabhaNewsNetwork |  
Published : Apr 05, 2025, 12:47 AM IST
04ಬಿಜೆಪಿ | Kannada Prabha

ಸಾರಾಂಶ

ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಭಾನುವಾರ ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ

ಕನ್ನಡಪ್ರಭ ವಾರ್ತೆ ಉಡುಪಿ

ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಭಾನುವಾರ ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಜೆಪಿ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಜಿಲ್ಲೆ ಮತ್ತು ಮಂಡಲಗಳ ಮಟ್ಟದಲ್ಲಿ ಪಕ್ಷದ ಧ್ವಜಾರೋಹಣ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

10ರಂದು ಬೆಳಗ್ಗೆ 9.30 ಕ್ಕೆ ಜನಾಕ್ರೋಶ ಯಾತ್ರೆಯ ಬೃಹತ್ ಜಾಥಾ ಉಡುಪಿಯ ಪಾರ್ಕಿಂಗ್ ಏರಿಯಾ ಬಳಿ ಪ್ರಾರಂಭಗೊಂಡು ಕಲ್ಸಂಕ ಮಾರ್ಗವಾಗಿ ಸಾಗಿ ಕಡಿಯಾಳಿಯಲ್ಲಿ ಸಮಾಪನಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ರಾಜ್ಯ ಮತ್ತು ಜಿಲ್ಲಾ ನಾಯಕರು, ಜಿಲ್ಲೆಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮಾಗಮದೊಂದಿಗೆ ಬೃಹತ್ ಜನಾಕ್ರೋಶ ಸಮಾವೇಶ ನಡೆಯಲಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಜನಾಕ್ರೋಶ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಮಾರ್ಗದರ್ಶನ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸುರೇಶ್ ಶೆಟ್ಟಿ ಕಾಡೂರು, ಮಹಾವೀರ ಹೆಗ್ಡೆ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಸದಾನಂದ ಬಳ್ಕೂರು, ಉದಯ ಎಸ್. ಕೋಟ್ಯಾನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲ್ಲೇಶ್ ಶೆಟ್ಟಿ ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ