ಉಡುಪಿ: ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

KannadaprabhaNewsNetwork |  
Published : Mar 22, 2025, 02:01 AM IST
21ಲಾ | Kannada Prabha

ಸಾರಾಂಶ

ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್.ಎಸ್.ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಅಂತಾರಾಷ್ಟ್ರೀಯ ರಕ್ತದಾನ ಮತ್ತು ಅದರ ಅರಿವು ಹಾಗೂ ಮಹತ್ವ ಎಂಬ ಕಾರ್ಯಕ್ರಮ ಆಯೋಜಿಸಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಒಬ್ಬ ವ್ಯಕ್ತಿ ಮಾಡುವ ರಕ್ತದಾನ ಮೂರು ಜನರ ಜೀವ ಉಳಿಸಬಲ್ಲದು ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ರಕ್ತ ನಿಧಿ ಘಟಕದ ಮುಖ್ಯಸ್ಥೆ ಡಾ. ಶಮಿ ಶಾಸ್ತ್ರಿ ತಿಳಿಸಿದ್ದಾರೆ.

ಇಲ್ಲಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್.ಎಸ್.ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ರಕ್ತದಾನ ಮತ್ತು ಅದರ ಅರಿವು ಹಾಗೂ ಮಹತ್ವ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಏಡ್ಸ್ ತಡೆಗಟ್ಟುವ ವಿಭಾಗದ ಸಂಯೋಜಕ ಮಹಾಭಲೇಶ್ವರ್ ಮಾತನಾಡಿ, ಉಡುಪಿಯು ರಾಜ್ಯದಲ್ಲೇ ಅತಿ ಹೆಚ್ಚು ರಕ್ತದಾನ ಮಾಡುವ ಜಿಲ್ಲೆ ಎಂದು ಪ್ರಸಿದ್ಧಿ ಪಡೆದಿದೆ. ಇದಕ್ಕೆ ಮುಖ್ಯ ಕಾರಣ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ನಮ್ಮ ಯುವ ಪೀಳಿಗೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕಿ ಪ್ರೊ.(ಡಾ.) ನಿರ್ಮಲ ಕುಮಾರಿ ಕೆ. ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ.(ಡಾ.) ರಘುನಾಥ್ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು.

ಹೆಚ್ಚು ಬಾರಿ ರಕ್ತದಾನ ಮಾಡಿದ ವಿದ್ಯಾಥಿ೯ಗಳಾದ ಶಶಾಂಕ್ ಮತ್ತು ನಮನ್ ಹರೀಶ್ ಅವರನ್ನು ಸನ್ಮಾನಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಡಾ.ಸಿ.ಬಿ. ನವೀನ್ ಚಂದ್ರ ಹಾಗೂ ಅಮೋಘ್ ಗಾಡ್ಕರ್ ಮತ್ತು ಯುವ ರೆಡ್ ಕ್ರಾಸ್ ಘಟಕ ಪ್ರೊ. ಈರಪ್ಪ ಎಸ್. ಮೇದಾರ್ ಕಾಯ೯ಕ್ರಮ ಆಯೋಜಿಸಿದರು.

ಮಾನವಿಕ ವಿಭಾಗದ ಮುಖ್ಯಸ್ಥ ಪ್ರೊ. ರೋಹಿತ್ ಎಸ್. ಅಮಿನ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ. ಸುರೇಖ ಕೆ., ಐಕ್ಯುಎಸಿಯ ಸಂಯೋಜನ ಅಧಿಕಾರಿ ಡಾ. ಜಯಮೋಲ್ ಪಿ.ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ನಂದನ್ ರೈಮಂಡ್ ಮಚಾಡೊ ಹಾಗೂ ಬಸವರಾಜ್ ಹಾಜರಿದ್ದರು.

ರವಿಚಂದ್ರ ಸ್ವಾಗತಿಸಿದರು, ಮಂಜುನಾಥ್ ವಂದಿಸಿದರು, ಚಂದ್ರಿಕಾ ನಿರೂಪಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ