ಉಡುಪಿ: ಜಿಲ್ಲಾ ಕಾರಾಗೃಹಕ್ಕೆ ಸಂದರ್ಶಕರ ಮಂಡಳಿ ಭೇಟಿ

KannadaprabhaNewsNetwork |  
Published : Oct 25, 2026, 02:45 AM IST
ಕಾರಾಗೃಹಕ್ಕೆ ಸಂದರ್ಶಕರ ಮಂಡಳಿ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿತು | Kannada Prabha

ಸಾರಾಂಶ

ಜಿಲ್ಲಾಧಿಕಾರಿ ನೇತೃತ್ವದ ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿಯು ಶುಕ್ರವಾರ ಇಲ್ಲಿನ ಬೊಮ್ಮರಬೆಟ್ಟು ಗ್ರಾಮದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ, ವ್ಯವಸ್ಥೆಗಳನ್ನು ಪರಿಶೀಲಿಸಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆಯಲ್ಲಿ ಕಾರಾಗೃಹ ಸಂದರ್ಶಕರ ಮಂಡಳಿಯ ಸಭೆಯನ್ನು ಕಾರಾಗೃಹದಲ್ಲಿಯೇ ನಡೆಸಲಾಯಿತು.

ಉಡುಪಿ: ಜಿಲ್ಲಾಧಿಕಾರಿ ನೇತೃತ್ವದ ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿಯು ಶುಕ್ರವಾರ ಇಲ್ಲಿನ ಬೊಮ್ಮರಬೆಟ್ಟು ಗ್ರಾಮದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ, ವ್ಯವಸ್ಥೆಗಳನ್ನು ಪರಿಶೀಲಿಸಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆಯಲ್ಲಿ ಕಾರಾಗೃಹ ಸಂದರ್ಶಕರ ಮಂಡಳಿಯ ಸಭೆಯನ್ನು ಕಾರಾಗೃಹದಲ್ಲಿಯೇ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾವು ಶಾಸಕ ಗುರ್ಮ ಸುರೇಶ್ ಶೆಟ್ಟಿ ಭಾಗವಹಿಸಿ, ಜಿಲ್ಲಾ ಕಾರಾಗೃಹದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕಾರಾಗೃಹದಲ್ಲಿರುವ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದು, ಅವುಗಳ ಅಭಿವೃದ್ಧಿ ಹಾಗೂ ಅಗತ್ಯ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರಳತೆ, ಸಜ್ಜನಿಕೆ, ಅಪಾರ ಪಾಂಡಿತ್ಯದ ಅಪರೂಪದ ಸಂಗಮ ಪುಣಿಂಚತ್ತಾಯ: ಸಲೀಂ ಅಹ್ಮದ್
ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವುದಷ್ಟೇ ಅಂತಿಮ ಗುರಿಯಲ್ಲ: ಪ್ರೊ. ಜಗದೀಶ್ ಕುಮಾರ್