ಮಕ್ಕಳ ಜೊತೆ ವ್ಯವಹರಿಸುವ ಸಂವೇದನಾಶೀಲತೆಯಿಂದ ವ್ಯವಹರಿಸಿ: ಡಾ. ತಿಪ್ಪೇಸ್ವಾಮಿ

KannadaprabhaNewsNetwork |  
Published : Jan 23, 2026, 02:45 AM IST
22ಮಕ್ಕಳು | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಮಕ್ಕಳ ಪಾಲನ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣೆ ಕುರಿತು ಅರಿವು ಕಾರ್ಯಕ್ರಮ

ಉಡುಪಿ: ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಮನನ ಮಾಡುವ ಜೊತೆಗೆ ಕೌಶಲ್ಯವನ್ನು ಮೇಲ್ದರ್ಜೆಗೇರಿಸಿ ಮಕ್ಕಳ ಜೊತೆ ಸಂವೇದನಾಶೀಲತೆಯಿಂದ ವ್ಯವಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು.ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ಮಕ್ಕಳ ಪಾಲನ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ರಕ್ಷಣೆ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ರಾಜ್ಯದ 5970 ಗ್ರಾಮಗಳಲ್ಲೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿ ಅವರ ಸಮಸ್ಯೆ, ಅಹವಾಲುಗಳನ್ನು ಆಲಿಸಲಾಗಿದೆ ಎಂದರು.

ಮಕ್ಕಳ ಜೊತೆ ವ್ಯವಹರಿಸುವ ಮಕ್ಕಳ ಪಾಲನಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಗಳ ಕಾರ್ಯಕರ್ತರು ಕೇವಲ ಕಾನೂನಾತ್ಮಕ ದೃಷ್ಟಿಯಿಂದ ನೋಡದೆ ಮಕ್ಕಳ ಜೀವನದ ಆಶಾಕಿರಣವಾಗಿ ಆರೈಕೆ ಮತ್ತು ಪುನರ್ವಸತಿ ಪ್ರಕ್ರಿಯೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಸ್ಪಷ್ಟ ಮಾರ್ಗದರ್ಶನ ನೀಡಲಿದೆ. ಮಕ್ಕಳ ಸಮಸ್ಯೆಗಳನ್ನು ನೋಡುವ ಮತ್ತು ಅವರ ಜೊತೆ ವ್ಯವಹರಿಸುವ ಮನೋಭಾವ ಬದಲಾಗಬೇಕು ಎಂದರು.

ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕಿ ಹಲಿಮಾ ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಬಾಲ ನ್ಯಾಯ ಕಾನೂನಿನ ಬಗ್ಗೆ ಸರಿಯಾದ ಮಾಹಿತಿ ಇರಬೇಕು. ಮಕ್ಕಳಿಗೆ ಸಂಬಂಧಿಸಿದ ದೂರುಗಳನ್ನು ಬರೆಯುವಾಗ ಸ್ಪಷ್ಟತೆ ಇರಬೇಕು. ತಮ್ಮಲ್ಲಿಗೆ ಬರುವ ಮಕ್ಕಳು ಇನ್ಯಾರದೊ ಎಂದು ತಾತ್ಸಾರ ಮಾಡದೆ ಆ ಜಾಗದಲ್ಲಿ ತಮ್ಮದೇ ಮಕ್ಕಳಿದ್ದಾಗ ಯಾವ ರೀತಿ ಪ್ರೀತಿ, ಕಾಳಜಿ ತೋರುತ್ತೇವೆಯೋ ಅದೇ ರೀತಿ ಸಂವೇದನೆ ತೋರಬೇಕು ಎಂದ ಅವರು, ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಪ್ರಭು ಡಿ.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಭಾನುಮತಿ, ಮಕ್ಕಳ ರಕ್ಷಣಾ ಘಟಕದ ನಾಗರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಡೋಟಾ ಕಾರ್ಖಾನೆ ಪರವಾನಗಿ ರದ್ದಾಗಲಿ
ಪ್ರೊ. ಮಾಲತಿ, ಸತೀಶ ಕುಲಕರ್ಣಿಗೆ ಬೇಂದ್ರೆ ಪ್ರಶಸ್ತಿ