ಉಡುಪಿ ನಗರ ಬಿಜೆಪಿಯಿಂದ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ

KannadaprabhaNewsNetwork |  
Published : Aug 13, 2025, 12:30 AM IST
12ಕಮಲ | Kannada Prabha

ಸಾರಾಂಶ

ಉಡುಪಿ ನಗರ ಬಿಜೆಪಿಯಿಂದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ ಇಲ್ಲಿನ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನಗರ ಬಿಜೆಪಿಯಿಂದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ ಇಲ್ಲಿನ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ಯಶಸ್ವಿಯಾಗಿ ನಡೆಯಿತು.ಕಮಲ ಕಲರವ ಕಾರ್ಯಕ್ರಮವನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ, ನಗರ ಭಾಗದ ಯುವ ಜನತೆಗೆ ಗ್ರಾಮೀಣ ಕ್ರೀಡೆಗಳನ್ನು ಪರಿಚಯಿಸಿ, ಕೃಷಿ ಕ್ಷೇತ್ರದ ಹಿರಿಯ ಸಾಧಕರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರನ್ನು ಗೌರವಿಸುವ ಆಶಯದೊಂದಿಗೆ ಆಯೋಜಿಸಿರುವ ಉಡುಪಿ ನಗರ ಬಿಜೆಪಿ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರಾದ ಚಂದ್ರಶೇಖರ್ ನಾಯ್ಕ್, ವಿಠಲ ನಾಯಕ್, ಗದ್ದೆಯ ಮಾಲೀಕರಾದ ಪ್ರಕಾಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಹಿರಿಯ ಕಾರ್ಯಕರ್ತರಾದ ಹಾಡಿಮನೆ ಗೋಪಾಲ ಶೆಟ್ಟಿ, ಕೆ. ಟಿ. ಪೂಜಾರಿ, ಕೇಶವ ಸಾಲ್ಯಾನ್, ಮೋಹನ್ ಉಪಾಧ್ಯಾಯ, ರಘುರಾಮ ಶೆಟ್ಟಿ, ಮಾಧವ ಅಂಚನ್, ದೇವು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.ಕಮಲ ಕಲರವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಸಾರ್ವಜನಿಕರಿಗೆ ವಿವಿಧ ಕ್ರೀಡೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಸಮಾರಂಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಕಿದಿಯೂರು, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಪಕ್ಷದ ನಾಯಕರಾದ ರಜನಿ ಹೆಬ್ಬಾರ್, ವಿಜಯ ಕೊಡವೂರು, ದಿನಕರ ಬಾಬು, ವೀಣಾ ಶೆಟ್ಟಿ, ರಶ್ಮಿತಾ ಬಾಲಕೃಷ್ಣ, ನಳಿನಿ ಪ್ರದೀಪ್, ಹಿರಿಯ ಮುಖಂಡರು, ನಗರ ಸಭಾ ಸದಸ್ಯರು, ವಿವಿಧ ಮೋರ್ಚಗಳ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ