ಉಡುಪಿ: ಯುವ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Nov 30, 2026, 04:00 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಲಾಯಿತು | Kannada Prabha

ಸಾರಾಂಶ

ಮೆಟಾ ಸಂಸ್ಥೆ ಬಿಜೆಪಿ ಬೇಟಾದಂತೆ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಉಡುಪಿ: ಮೆಟಾ ಸಂಸ್ಥೆ ಬಿಜೆಪಿ ಬೇಟಾದಂತೆ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗಿತ್ತು. ಅಲ್ಲಿಂದ ಆರಂಭವಾದ ಬಿಜೆಪಿಯ ವ್ಯವಸ್ಥಿತ ಸಂಚು ಇದೀಗ ಸಾಮಾಜಿಕ ಜಾಲತಾಣಗಳಿಗೂ ವಿಸ್ತರಿಸಿದೆ ಎಂದು ಆರೋಪಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಧ್ವನಿ ಎತ್ತುವ ನಾಯಕರ ವಿಡಿಯೊ ಮತ್ತು ಬರಹಗಳನ್ನು ಅಳಿಸಲಾಗುತ್ತಿದೆ. ಬಳಿಕ ಅವರ ಖಾತೆಗಳನ್ನೇ ಬಂದ್ ಮಾಡುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಮೆಟಾ ಸಂಸ್ಥೆ ಮಾಡುತ್ತಿದೆ ಎಂದು ದೂರಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಸುರೇಶ್ ಶೆಟ್ಟಿ ಬನ್ನಂಜೆ, ನವೀನ್ ಸಾಲಿಯಾನ್, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಸ್ತೇಜನಗೊಂಡ ಗ್ರಾಮೀಣ ಗ್ರಂಥಾಲಯಗಳು !
ಪ್ರತಿಯೊಬ್ಬ ಕನ್ನಡಿಗ ನಾಡಿನ ಕಾವಲುಗಾರನಾಗಬೇಕಿದೆ: ಚಲಪತಿ ಗೌಡ