ಮನರೇಗ ಮರು ಸ್ಥಾಪನೆ ಆಗ್ರಹಿಸಿ ಉಡುಪಿ ಕಾಂಗ್ರೆಸ್ ಪ್ರತಿಭಟನೆ

KannadaprabhaNewsNetwork |  
Published : Feb 25, 2026, 02:45 AM IST
ಮನರೇಗ ಮೂಲ ಸ್ವರೂಪವನ್ನು ಮರುಸ್ಥಾಪಿಸುವಂತೆ ಆಗ್ರಹಿಸಿ ಎಡಿಸಿ ಮೂಲಕ ಮನವಿ ಸಲ್ಲಿಸಲಾಯಿತು  | Kannada Prabha

ಸಾರಾಂಶ

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದು ಅದರ ಹೆಸರನ್ನು ವಿಬಿ - ರಾಮ್ - ಜಿ ಎಂಬುದಾಗಿ ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮಂಗಳವಾರ ರಜತಾದ್ರಿಯ ಜಿಲ್ಲಾ ಇಲಾಖೆಗಳ ಸಂಕೀರ್ಣದ ಮುಂದೆ ಪ್ರತಿಭಟನೆ ನಡೆಸಿತು.

ಉಡುಪಿ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದು ಅದರ ಹೆಸರನ್ನು ವಿಬಿ - ರಾಮ್ - ಜಿ ಎಂಬುದಾಗಿ ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮಂಗಳವಾರ ರಜತಾದ್ರಿಯ ಜಿಲ್ಲಾ ಇಲಾಖೆಗಳ ಸಂಕೀರ್ಣದ ಮುಂದೆ ಪ್ರತಿಭಟನೆ ನಡೆಸಿತು.

ಇದಕ್ಕೂ ಮೊದಲು ಪ್ರತಿಭಟನಾಕಾರರು ಮಣಿಪಾಲ ಕಾಯಿನ್ ವೃತ್ತದಿಂದ ಜಿಲ್ಲಾ ಸಂಕೀರ್ಣದವರೆಗೆ ಪಾದಯಾತ್ರೆ ನಡೆಸಿದರು. ನಂತರ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ‍ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಮೂಲ ಸ್ವರೂಪವನ್ನು ಮರುಸ್ಥಾಪಿಸಬೇಕು, ಗ್ರಾಮೀಣ ಜನತೆ ಹಾಗೂ ಕಾರ್ಮಿಕರ ಬೇಡಿಕೆಯ ಮೇರೆಗೆ ಕೆಲಸ ಪಡೆಯಲು ಕಾನೂನುಬದ್ದ ಖಾತರಿ, ವರ್ಷದ ಎಲ್ಲಾ ತಿಂಗಳುಗಳಲ್ಲಿ ಕೆಲಸ ನೀಡುವ ಹಕ್ಕು, ನರೇಗದ ಅಖಿಲ ಭಾರತ ಸ್ವರೂಪ ಮತ್ತು ಗ್ರಾಮ ಪಂಚಾಯಿತಿಯ ಕೆಲಸವನ್ನು ಆಯ್ಕೆ ಮಾಡುವ ಅಧಿಕಾರ ಹಾಗೂ ಗ್ರಾಮಗಳಲ್ಲಿ ಅಭಿವೃದ್ಧಿ ಯೋಜಿಸುವ ಹಕ್ಕು ಹಾಗೂ ಅಧಿಕಾರವನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮತ್ತು ಕೆ. ಜಯಪ್ರಕಾಶ ಹೆಗ್ಡೆ, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಮುಂತಾದವರು ಮಾತನಾಡಿದರು

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಪ್ರಮುಖರಾದ ವೆರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ದಿನೇಶ್ ಹೆಗ್ಡೆ ಮಳವಳ್ಳಿ, ನೀರೆ ಕೃಷ್ಣ ಶೆಟ್ಟಿ, ವೈ.ಸುಕುಮಾರ್, ಸಂತೋಷ್ ಕುಲಾಲ್, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರ್, ಶಬ್ಬಿರ್ ಆಹ್ಮದ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವೆರ, ಹರಿಪ್ರಸಾದ್ ರೈ, ಮಿಲಿಯಂ ರ್ಮಾಟೀಸ್, ಕಿಶೋರ್ ಕುಮಾರ್ ಎರ್ಮಾಳ್, ಮಹಾಬಲ ಕುಂದರ್, ಸುರೇಶ್ ಶೆಟ್ಟಿ ಬನ್ನಂಜೆ, ಇಸ್ಮಾಯಿಲ್ ಅತ್ರಾಡಿ, ಎಲ್ಲೂರು ಶಶಿಧರ ಶೆಟ್ಟಿ ಎಲ್ಲೂರು, ಕೇಶವ ಕೋಟ್ಯಾನ್, ಗಣೇಶ್ ನೆರ್ಗಿ, ಗಣೇಶ್ ರಾಜ್ ಸರಳೆಬೆಟ್ಟು ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯವಸಾಯದಲ್ಲಿ ತಂತ್ರಜ್ಞಾನದ ಅಳವಡಿಕೆ ಅವಶ್ಯ: ಚೇತನಾ ಪಾಟೀಲ
ಸಿಎಂ ಜೊತೆ ಚರ್ಚಿಸಿ ವಿವಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಚಿವ ಡಾ. ಎಂ.ಸಿ. ಸುಧಾಕರ್