ಉಡುಪಿ ಕ್ಷೇತ್ರ: ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ

KannadaprabhaNewsNetwork |  
Published : May 27, 2024, 01:08 AM IST
೨೬ಬಿಹೆಚ್‌ಆರ್ ೧: ಬಾಳೆಹೊನ್ನೂರಿನಲ್ಲಿ ನಡೆದ ಎನ್.ಆರ್.ಪುರ, ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಅಂಶುಮಂತ್, ನಟರಾಜ್, ಸುದೇವ್, ಪಲ್ಲವಿ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

- ನಾರಾಯಣ ಗುರು ಸಮುದಾಯ ಭವನದಲ್ಲಿ ಎನ್.ಆರ್.ಪುರ-ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಪಟ್ಟಣದ ನಾರಾಯಣ ಗುರು ಸಮುದಾಯ ಭವನದಲ್ಲಿ ಎನ್.ಆರ್.ಪುರ-ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆ, ವಿಧಾನ ಪರಿಷತ್ ಚುನಾವಣೆ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿ ದರು. ಕ್ಷೇತ್ರದ ಹಾಲಿ ಇರುವ ಸಂಸದರು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸಹ ಸಿಗುತ್ತಿರಲಿಲ್ಲ ಎಂಬ ಆರೋಪದ ಕಾರಣ ದಿಂದಾಗಿ ಬಿಜೆಪಿ ಹಲವು ಮತದಾರರು ನನಗೆ ಈ ಬಾರಿ ಮತ ನೀಡಿದ್ದಾರೆ. ಬಿಜೆಪಿ ಪಕ್ಷದವರು ಚುನಾವಣಾ ಕದನದಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಅಷ್ಟಾಗಿ ಪ್ರಚಾರ ಭರಾಟೆ ಮಾಡಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತರಾಗಿ ಹಗಲಿರುಳು ಪ್ರಚಾರ ನಡೆಸಿದ್ದು ಇದಕ್ಕೆ ಕೃತಜ್ಞನಾಗಿದ್ದೇನೆ.

ಜೂ.4ರಂದು ನಡೆಯುವ ಮತ ಎಣಿಕೆ ದಿನ ಪಕ್ಷದ ಕಾರ್ಯಕರ್ತರು ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಲು ಜೂ.3ರಂದು ಉಡುಪಿಯಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮತ ಎಣಿಕೆ ಕೇಂದ್ರದ ಒಳಗೆ ಬರುವವರು ತಾಳ್ಮೆ ಯಿಂದ ಇರಬೇಕು. ಎಣಿಕೆ ಏಜೆಂಟರು ಎಣಿಕೆ ಆರಂಭದಿಂದ ಮುಗಿಯುವವರೆಗೆ ಕೇಂದ್ರದಿಂದ ಹೊರಬರುವಂತಿಲ್ಲ. ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬರುವ ವಿಧಾನ ಪರಿಷತ್ ಹಾಗೂ ಶಿಕ್ಷಕರ, ಪದವೀಧರ ಕ್ಷೇತ್ರದ ಚುನಾವಣೆ ಬಗ್ಗೆ ಕಾರ್ಯಕರ್ತರು ಅರ್ಹ ಮತ ದಾರರನ್ನು ಸಂಪರ್ಕಮಾಡಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಚುನಾವಣಾ ವೀಕ್ಷಕರಾದ ಸುದೇವ್, ಪಲ್ಲವಿ, ಎನ್.ಆರ್.ಪುರ ಬ್ಲಾಕ್ ಅಧ್ಯಕ್ಷ ಗೇರುಬೈಲು ನಟರಾಜ್, ಶೃಂಗೇರಿ ಬ್ಲಾಕ್ ಅಧ್ಯಕ್ಷ ಮಾರನಕೊಡಿಗೆ ನಟರಾಜ್, ಕೊಪ್ಪ ಬ್ಲಾಕ್ ಅಧ್ಯಕ್ಷ ಬಾಳೆಮನೆ ನಟರಾಜ್, ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ, ಮುಖಂಡರಾದ ಎಚ್.ಎಂ.ಸತೀಶ್, ಬಿ.ಸಿ.ಸಂತೋಷ್‌ಕುಮಾರ್, ಮಹಮ್ಮದ್ ಹನೀಫ್, ವೆಂಕಟೇಶ್, ಮಹಮ್ಮದ್ ಇಫ್ತೆಖಾರ್ ಆದಿಲ್, ಸದಾಶಿವ, ವಜ್ರಪ್ಪ, ಬಿ.ಸಿ.ಮಂಜುನಾಥ್, ಸೋಮೇಶ್‌ಗೌಡ, ಗುರುಮೂರ್ತಿ ಬೆಳಸೆ, ರತ್ನಾಕರ್, ಇಬ್ರಾಹಿಂ ಶಾಫಿ, ಹಿರಿಯಣ್ಣ ಮತ್ತಿತರರು ಹಾಜರಿದ್ದರು.

೨೬ಬಿಹೆಚ್‌ಆರ್ ೧:

ಬಾಳೆಹೊನ್ನೂರಿನಲ್ಲಿ ನಡೆದ ಎನ್.ಆರ್.ಪುರ, ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಅಂಶುಮಂತ್, ನಟರಾಜ್, ಸುದೇವ್, ಪಲ್ಲವಿ ಇದ್ದರು.

PREV

Recommended Stories

ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಟನಲ್ ರಸ್ತೆ, ಎ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ: ಡಿಕೆಶಿ