ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21 ರವರೆಗೆ ಜರಗಲಿರುವ ‘ಪಂಚಮ’ ಉಡುಪಿ-ಉಚ್ಚಿಲ ದಸರಾ- 2026 ಆಮಂತ್ರಣ ಪತ್ರಿಕೆಯನ್ನು ಭಾನುವಾರ ಸಂಘದ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು.
ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21 ರವರೆಗೆ ಜರಗಲಿರುವ ‘ಪಂಚಮ’ ಉಡುಪಿ-ಉಚ್ಚಿಲ ದಸರಾ- 2026 ಆಮಂತ್ರಣ ಪತ್ರಿಕೆಯನ್ನು ಭಾನುವಾರ ಸಂಘದ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.ಬಳಿಕ ಮಾತನಾಡಿದ ಡಾ. ಜಿ. ಶಂಕರ್, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಕಾರಣ ನಮ್ಮ ಮಿತಿಯಲ್ಲಿ ಈ ಬಾರಿಯ 5 ನೇ ವರ್ಷದ ದಸರಾ ಆಚರಿಸಲಿದ್ದೇವೆ. ಕಳೆದ ಬಾರಿಯಂತೆ ಈ ಬಾರಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷ ಆಕರ್ಷಣೆಗಳು ಇರಲಿದೆ. ಉಡುಪಿ ಉಚ್ಚಿಲ ದಸರಾವನ್ನು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಎಂ. ಲಮಾಣಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಶದ್, ಆರೋಗ್ಯ ಸಚಿವ ಯುಟಿ ಖಾದರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಶೋಭಾ ಯಾತ್ರೆಯು ಈ ಹಿಂದಿನ ದಸರಾದಂತೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದರು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ.ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರಾ ಮಲ್ಪೆ ಮಾತನಾಡಿದರು.ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಪ್ರಮುಖರಾದ ರತ್ನಾಕರ್ ಸಾಲ್ಯಾನ್ ಮಲ್ಪೆ, ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ. ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಸುಗುಣ ಎಸ್ ಕರ್ಕೇರ, ಸುಧಾಕರ್ ಕುಂದರ್ ಬಂಕೇರ್ ಕಟ್ಟ, ದಿನೇಶ್ ಎರ್ಮಾಳು, ಯಜ್ಞೇಶ್ ಕರ್ಕೇರ, ಕವಿತಾ ಶರತ್, ಉದಯ ಕುಮಾರ್ ಹಟ್ಟಿಯಂಗಡಿ, ದೇವಳದ ಪ್ರಬಂಧಕ ಸತೀಷ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.