ಉಡುಪಿ: 30 ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ಕ್ರಮಕ್ಕೆ ಡಿಸಿ ಆದೇಶ

KannadaprabhaNewsNetwork |  
Published : Oct 19, 2023, 12:45 AM IST
ಡಿಸಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಭೆಯಲ್ಲಿ ಎಸ್ಪಿ, ಎಡಿಸಿ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯನ್ನು ಹೆದ್ದಾರಿಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ ಉಡುಪಿ ಜಿಲ್ಲೆಯನ್ನು ಹೆದ್ದಾರಿಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಅಧಿಕಾರಿಗಳು ತತ್‌ಕ್ಷಣ ಈ ಬ್ಲಾಕ್ ಸ್ಪಾಟ್ ಗಳಲ್ಲಿ ವೈಜ್ಞಾನಿಕ ಸುರಕ್ಷಿತಾ ವ್ಯವಸ್ಥೆ ಕೈಗೊಂಡು ಅಪಘಾತಗಳನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಹಳ ಕಾಲದಿಂದ ನೆನಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಮೇಲ್ ಸೇತುವೆ ರಸ್ತೆ ಕಾಮಗಾರಿಯನ್ನು ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೇ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದವರು ಸೂಚನೆ ನೀಡಿದರು. ರಸ್ತೆಯ ಬದಿಯ ಖಾಲಿ ಸ್ಥಳವಿರುವಲ್ಲಿ ಗಿಡ ಮರಗಳನ್ನು ನೆಡವಂತೆ, ರಸ್ತೆ ಪಕ್ಕ ಅಪಾಯಕಾರಿ ಮರ, ಕೊಂಬೆಗಳನ್ನು ತೆರವುಗೊಳಿಸುವಂತೆ ಡಿಸಿ ಸೂಚಿಸಿದರು. ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ನಗರಸಭೆ ಪೌರಾಯುಕ್ತ ರಾಯಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಎಂಜಿನಿಯರ್ ದಿನೇಶ್ ಕೆ.ಎನ್., ರಾಷ್ಟ್ರೀಯ ಹೆದ್ದಾರಿ ಅಭಿಯಂತರ ಮಂಜುನಾಥ್ ಹಾಗೂ ಮತ್ತಿತರರು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ