ಭಯಮುಕ್ತ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉಡುಪಿ ಜಿಲ್ಲಾಡಳಿತ ಪೂರ್ಣ ಸಿದ್ಧತೆ

KannadaprabhaNewsNetwork |  
Published : Mar 13, 2026, 02:45 AM IST
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆ ನಡೆಯಿತು | Kannada Prabha

ಸಾರಾಂಶ

ಮಾ. 18ರಿಂದ ಏ. 22ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 7353 ಹುಡುಗರು ಹಾಗೂ 6798 ಹುಡುಗಿಯರು ಸೇರಿದಂತೆ ಒಟ್ಟು 14151 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಉಡುಪಿ: ಮಾ. 18ರಿಂದ ಏ. 22ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 7353 ಹುಡುಗರು ಹಾಗೂ 6798 ಹುಡುಗಿಯರು ಸೇರಿದಂತೆ ಒಟ್ಟು 14151 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ, ವಿದ್ಯಾರ್ಥಿಗಳು ಸುಗಮವಾಗಿ ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ಹೇಳಿದ್ದಾರೆ.

ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹೊಸದಾಗಿ 13,516 ಸಾಮಾನ್ಯ ವಿದ್ಯಾರ್ಥಿಗಳು, 295 ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ

ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ 686 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂದರು.

1350 ಅಧಿಕಾರಿಗಳ ನಿಯೋಜನೆ: ಪರೀಕ್ಷಾ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರದ ಕ್ಯಾಂಪಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗುವುದು, ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷೆ ಆಗಿರುವುದರಿಂದ ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಅಧೀಕ್ಷಕರು, ಮೇಲ್ವಿಚಾರಕರು, ಜಾಗೃತಿ ದಳ, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿದಂತೆ 1350 ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಮಂಗಳೂರು ಸಿ.ಟಿ.ಇ. ಪ್ರಾಂಶುಪಾಲೆ ಪುಷ್ಪಲತಾ ಮಾತನಾಡಿ, ಸಹಾಯಕ ಕಮೀಷನರ್ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಂಕರಪುರ ಕ್ಷೇತ್ರ: 31ರಿಂದ ಮುಖ್ಯಪ್ರಾಣ ಶಿಲಾಮೂರ್ತಿ ಬ್ರಹ್ಮಕಲಶೋತ್ಸವ
ಡಾ ಮಂತರ್ ಪ್ರಯತ್ನ: ಕೊಡವ ಹೆರಿಟೇಜ್ ಸೆಂಟರ್ ಶೀಘ್ರ ಲೋಕಾರ್ಪಣೆ