ಪಾಕಿಸ್ತಾನಿಗಳ ಗಡಿಪಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ

KannadaprabhaNewsNetwork |  
Published : May 08, 2025, 12:37 AM IST
6ಮನವಿ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ತಕ್ಷಣ ಪತ್ತೆಹಚ್ಚಿ ಅವರನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ನೆರವಿನಿಂದ 26 ಅಮಾಯಕ ಭಾರತೀಯ ಪ್ರಜೆಗಳನ್ನು ಕೊಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಪಾಕಿಸ್ತಾನಿ ಪ್ರಜೆಗಳು ದೇಶಬಿಟ್ಟು ಹೋಗುವಂತೆ ಆದೇಶಿಸಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ತಕ್ಷಣ ಪತ್ತೆಹಚ್ಚಿ ಅವರನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ದುರ್ಘಟನೆಯ ಹಿನ್ನೆಲೆಯ ವಿರುದ್ಧ ಕೇಂದ್ರ ಸರ್ಕಾರ ಪಾಕಿಸ್ತಾನ ವಿರುದ್ಧ ಈಗಾಗಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅದರಂತೆ ದೇಶದಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿಗಳ ವೀಸಾ, ದಾಖಲಾತಿಗಳು ರದ್ದಾಗಿದ್ದು,ಅಂತಹ ಪ್ರಜೆಗಳನ್ನು ಗುರುತಿಸಿ ಯಾವುದೇ ವಿಳಂಬವಿಲ್ಲದೇ ಕೂಡಲೇ ಅವರನ್ನು ಗಡಿಪಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪೆರಣoಕಿಲ ಶ್ರೀಶ ನಾಯಕ್, ಜಯರಾಮ್ ಸಾಲ್ಯಾನ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಪ್ರಮುಖರಾದ ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ಅಭಿರಾಜ್ ಸುವರ್ಣ, ರುಡಾಲ್ಫ್ ಡಿಸೋಜ, ಕರುಣಾಕರ ಶೆಟ್ಟಿ, ವಿವೇಕ್ ಪೈ, ದಿನೇಶ್ ಅಮೀನ್, ಜಿತೇಂದ್ರ ಶೆಟ್ಟಿ ಕಾಪು, ರಾಜೀವ್ ಕುಲಾಲ್, ರಶ್ಮಿತಾ ಶೆಟ್ಟಿ ಉಡುಪಿ, ಸಚಿನ್ ಪೂಜಾರಿ ಬ್ರಹ್ಮಾವರ, ಗೋಪಾಲಕೃಷ್ಣ ರಾವ್ ಮಟ್ಟು, ಶರಣ್ ಕುಮಾರ್ ಮಟ್ಟು, ಸತೀಶ್ ಪೂಜಾರಿ ಕುಂದಾಪುರ, ಸುಧೀರ್ ಕೆ.ಎಸ್. ಕುಂದಾಪುರ, ನಾರಾಯಣ ಮೂರ್ತಿ, ಕೆ.ದಿವಾಕರ ಶೆಟ್ಟಿ ಕಾಪು, ಪ್ರವೀಣ್ ಕುಮಾರ್ ಗುರ್ಮೆ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ