ಬೈಂದೂರು: ಸುವರ್ಣಮಹೋತ್ಸವ ವರ್ಷ-2026, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ ಬುಧವಾರ ನಾಗೂರು ಕೃಷ್ಣಲಲಿತಾ ಕಲಾಮಂದಿರದಲ್ಲಿ ನಡೆಯಿತು.
ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸಾಧಕರನ್ನು ಸನ್ಮಾನಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮೊಳಹಳ್ಳಿ ಮಹೇಶ ಹೆಗ್ಡೆ ಶಿಕ್ಷಕರಿಗೆ ಗೌರವಧನ ವಿತರಿಸಿದರು.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬೆಳ್ವೆ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಹಾಗೂ ಪಡುಬಿದ್ರಿ ಸಹಕಾರಿ ಸಂಘದ ವೈ. ಸುಧೀರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಖಂಬದಕೋಣೆ ರೈ. ಸೇ. ಸ. ಸಂಘದ ಅಧ್ಯಕ್ಷ ಸಹಕಾರರತ್ನ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಆರ್ಥಿಕತೆ ಮತ್ತು ಅಭಿವೃದ್ಧಿಯನ್ನು ಬಲಪಡಿಸುವುದು, ಸ್ವಾವಲಂಬನೆ ಸಾಧಿಸುವುದು ಹಾಗೂ ರೈತರು, ಮಹಿಳಾ ಸ್ವಸಹಾಯ ಗುಂಪುಗಳ ಮತ್ತು ಯುವಕರನ್ನು ಸಬಲೀಕರಣಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತಾನಾಡಿದರು. ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಇಓ ವಿಷ್ಣು ಆರ್ ಪೈ ಸನ್ಮಾನಿತರ ಪಟ್ಟಿವಾಚಿಸಿದರು. ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು.